ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಕೇಂದ್ರಗಳಲ್ಲಿ ಕೈಗಾರಿಕೆಅಭಿವೃದ್ಧಿ : ಜಗದೀಶ ಭರವಸೆ

Last Updated 7 ಜನವರಿ 2020, 16:44 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಲು ವಿಮಾನ, ಸಾರಿಗೆ ಸಂಪರ್ಕದಂತಹ ಮೂಲ ಸೌಕರ್ಯಗಳನ್ನು ಹೆಚ್ಚಿಸಲು ಆದ್ಯತೆ ನೀಡಲಾಗಿದೆ’ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ತಿಳಿಸಿದ್ದಾರೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಏರ್ಪಡಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

‘ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯಗಳು ಲಭ್ಯ ಇರುವುದರ ಜತೆಗೆ ಭೂಮಿ ಬೆಲೆ ಸಹ ಕಡಿಮೆ ಇದೆ. ಮಾಹಿತಿ ಕೊರತೆಯಿಂದ ಉದ್ದಿಮೆದಾರರು ಈ ಜಿಲ್ಲೆಗಳತ್ತ ಗಮನಹರಿಸಲು ಸಾಧ್ಯವಾಗಿಲ್ಲ. ರಾಜ್ಯ ಸರ್ಕಾರವು ಅವರ ಗಮನವನ್ನು ಈ ನಗರಗಳತ್ತ ಸೆಳೆಯಲು ಪ್ರಯತ್ನಿಸುತ್ತಿದೆ. ಇದರಿಂದ ಬೆಂಗಳೂರು ಕೈಗಾರಿಕಾ ಒತ್ತಡದಿಂದ ಮುಕ್ತವಾಗಲು ಸಾಧ್ಯವಾಗಲಿದೆ’ ಎಂದರು.

‘ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಕೈಗಾರಿಕೋದ್ಯಮಿಗಳು ಭೂ ಸ್ವಾಧೀನ, ವಿದ್ಯುತ್ ಪೂರೈಕೆ, ಪರವಾನಗಿ ಪಡೆಯುವುದು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ ಪರಿಹಾರಕ್ಕೆ ಕೈಗಾರಿಕಾ ಅದಾಲತ್ ನಡೆಸಲು ನಿರ್ಧರಿಸಲಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಅದಾಲತ್ ನಡೆಸಿ ಸ್ಥಳದಲ್ಲೇ ಸಮಸ್ಯೆ ಬಗೆಹರಿಸಲಾಗುವುದು’ ಎಂದರು. ಎಫ್‌ಕೆಸಿಸಿಐ ಅಧ್ಯಕ್ಷ ಸಿ. ಆರ್‌. ಜನಾರ್ಧನ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT