ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಹಣದುಬ್ಬರ ಇಳಿಕೆ: ದಾಸ್‌

Last Updated 9 ಜುಲೈ 2022, 10:45 IST
ಅಕ್ಷರ ಗಾತ್ರ

ನವದೆಹಲಿ: ‘ಹಣದುಬ್ಬರವು ಪ್ರಸಕ್ತ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಕ್ರಮೇಣ ಇಳಿಕೆ ಆಗುವ ನಿರೀಕ್ಷೆ ಇದೆ’ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಗವರ್ನರ್‌ ಶಕ್ತಿಕಾಂತ್‌ ದಾಸ್‌ ಶನಿವಾರ ತಿಳಿಸಿದ್ದಾರೆ.

‘ಬಲಿಷ್ಠ ಮತ್ತು ಸುಸ್ಥಿರ ಬೆಳವಣಿಗೆ ಸಾಧಿಸುವ ನಿಟ್ಟಿನಲ್ಲಿ ಹಣದುಬ್ಬರವನ್ನು ನಿಯಂತ್ರಣಕ್ಕೆ ತರಲು ಅಗತ್ಯವಾದ ಹಣಕಾಸಿನ ಕ್ರಮಗಳನ್ನು ಕೇಂದ್ರೀಯ ಬ್ಯಾಂಕ್‌ ಮುಂದುವರಿಸಲಿದೆ’ ಎಂದೂ ಅವರು ಹೇಳಿದ್ದಾರೆ.

ಕೌಟಿಲ್ಯ ಆರ್ಥಿಕ ಸಮಾವೇಶದ ಉದ್ಘಾಟನೆಯ ವೇಳೆ ಮಾತನಾಡಿದ ಅವರು, ‘ದೇಶದ ಆರ್ಥಿಕ ಸಂಸ್ಥೆಗಳಲ್ಲಿ ಜನರಿಗೆ ನಂಬಿಕೆ ಮತ್ತು ವಿಶ್ವಾಸ ಮೂಡಿಸುವಲ್ಲಿ ಹಣದುಬ್ಬರವು ಮಾನದಂಡವಾಗಿದೆ’ ಎಂದು ತಿಳಿಸಿದ್ದಾರೆ.

‘ನಮ್ಮ ನಿಯಂತ್ರಣಕ್ಕೆ ಸಿಗದೇ ಇರುವ ಅಂಶಗಳು ಅಲ್ಪಾವಧಿಯಲ್ಲಿ ಹಣದುಬ್ಬರದ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ, ಸುಸ್ಥಿರ ಆರ್ಥಿಕ ಬೆಳವಣಿಗೆ ಸಾಧಿಸುವ ಹಾದಿಯಲ್ಲಿ ಹಣದುಬ್ಬರವನ್ನು ನಿಯಂತ್ರಿಸಲು ಹಣಕಾಸು ನೀತಿಯಲ್ಲಿ ಸಕಾಲಕ್ಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

ಏಪ್ರಿಲ್‌ ತಿಂಗಳಿನಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ 7.79ಕ್ಕೆ ತಲುಪಿತ್ತು. ಮೇ ತಿಂಗಳಿನಲ್ಲಿ ಶೇ 7.04ಕ್ಕೆ ಅಲ್ಪ ಇಳಿಕೆ ಕಂಡಿತು. ಸತತ ಐದು ತಿಂಗಳುಗಳಿಂದ ಹಣದುಬ್ಬರವು ಶೇ6ಕ್ಕಿಂತ ಹೆಚ್ಚಿನ ಮಟ್ಟದಲ್ಲಿಯೇ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT