ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಿಷ್ಣುತೆ ಮಟ್ಟದಲ್ಲಿ ಹಣದುಬ್ಬರ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

Published 6 ಫೆಬ್ರುವರಿ 2024, 15:58 IST
Last Updated 6 ಫೆಬ್ರುವರಿ 2024, 15:58 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಹಣದುಬ್ಬರವು ಸಹಿಸಿಕೊಳ್ಳಬಹುದಾದ ಮಟ್ಟದಲ್ಲಿಯೇ ಇದ್ದು, ಸರ್ಕಾರವು ಬೆಲೆ ಏರಿಕೆ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

2022ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ಚಿಲ್ಲರೆ ಹಣದುಬ್ಬರವು ಸರಾಸರಿ ಶೇ 6.8ರಷ್ಟಿತ್ತು. 2023ರಲ್ಲಿ ಇದೇ ಅವಧಿಯಲ್ಲಿ ಸರಾಸರಿ ಶೇ 5.5ರಷ್ಟು ದಾಖಲಾಗಿದೆ. ಸದ್ಯ ಹಣದುಬ್ಬರವು ಸ್ಥಿರವಾಗಿದೆ ಎಂದು ತಿಳಿಸಿದರು.

ರಾಜ್ಯಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ‘‌ಈರುಳ್ಳಿಯು ದೀರ್ಘಕಾಲ ಕೆಡದಂತೆ ಆರ್ದ್ರಗೊಳಿಸುವಿಕೆ ಸಂಬಂಧ ಬಾಬಾ ಪರಮಾಣು ಸಂಶೋಧನಾ ಸಂಸ್ಥೆಯು (ಬಿಎಆರ್‌ಸಿ) ಸರ್ಕಾರದ ಜೊತೆ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT