ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ: ಇನ್ಫೊಸಿಸ್‌ ಲಾಭ ₹ 4,272 ಕೋಟಿ

Last Updated 15 ಜುಲೈ 2020, 18:39 IST
ಅಕ್ಷರ ಗಾತ್ರ

ನವದೆಹಲಿ: ಐ.ಟಿ ಸೇವೆಗಳನ್ನು ಒದಗಿಸುವ ದೇಶದ ಎರಡನೇ ಅತಿದೊಡ್ಡ ಕಂಪನಿ ಇನ್ಫೊಸಿಸ್‌, ಪ್ರಸಕ್ತ ಹಣಕಾಸು ವರ್ಷದ ಜೂನ್ ತ್ರೈಮಾಸಿಕದಲ್ಲಿ ₹ 4,272 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ನಿವ್ವಳ ಲಾಭ ₹3,802 ಕೋಟಿ ಇತ್ತು ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.

ತ್ರೈಮಾಸಿಕದಲ್ಲಿ ವರಮಾನವು₹ 21,803 ಕೋಟಿಗಳಿಂದ ₹ 23,665 ಕೋಟಿಗೆ ಏರಿಕೆಯಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ವರಮಾನವು ಕರೆನ್ಸಿ ಲೆಕ್ಕಾಚಾರದಲ್ಲಿ ಶೇ 2ರವರೆಗೂ ಹೆಚ್ಚಾಗಬಹುದು ಎಂದು ಕಂಪನಿ ಹೇಳಿದೆ.

ಕೋವಿಡ್‌ ಸೃಷ್ಟಿಸಿರುವ ಅನಿಶ್ಚಿತ ಪರಿಸ್ಥಿತಿಯಿಂದಾಗಿ ಕಂಪನಿಯು ಏಪ್ರಿಲ್‌ನಲ್ಲಿ ಪ್ರಸಕ್ತ ಹಣಕಾಸು ವರ್ಷಕ್ಕೆ ವರಮಾನ ಸಂಗ್ರಹದ ಮುನ್ನೋಟ ನೀಡಲು ನಿರಾಕರಿಸಿತ್ತು.

***

ಮೊದಲ ತ್ರೈಮಾಸಿಕದ ಫಲಿತಾಂಶ ಮತ್ತು ಪ್ರಮುಖ ಒಪ್ಪಂದಗಳಿಂದಾಗಿ ನಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ.
-ಸಲೀಲ್‌ ಪಾರೇಖ್‌, ಇನ್ಫೊಸಿಸ್‌ ಸಿಇಒ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT