ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ಫೊಸಿಸ್ ಲಾಭ ಶೇ 12ರಷ್ಟು ಏರಿಕೆ

Last Updated 13 ಏಪ್ರಿಲ್ 2022, 14:12 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಎರಡನೆಯ ಅತಿದೊಡ್ಡ ಐ.ಟಿ. ಸೇವಾ ಕಂಪನಿ ಇನ್ಫೊಸಿಸ್ ಮಾರ್ಚ್‌ ತ್ರೈಮಾಸಿಕದ ಫಲಿತಾಂಶವನ್ನು ಬುಧವಾರ ಪ್ರಕಟಿಸಿದ್ದು, ನಿವ್ವಳ ಲಾಭದಲ್ಲಿ ಶೇಕಡ 12ರಷ್ಟು ಹೆಚ್ಚಳ ಕಂಡಿದೆ. ಮಾರ್ಚ್‌ ತ್ರೈಮಾಸಿಕದಲ್ಲಿ ಕಂಪನಿಯು ₹ 5,686 ಕೋಟಿ ಲಾಭ ಗಳಿಸಿದೆ.

ಹಿಂದಿನ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು ₹ 5,076 ಕೋಟಿ ನಿವ್ವಳ ಲಾಭ ಕಂಡಿತ್ತು. ಆದಾಯವು ಈ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಶೇ 22.7ರಷ್ಟು ಹೆಚ್ಚಳವಾಗಿದ್ದು, ₹ 32,276 ಕೋಟಿಗೆ ತಲುಪಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಪನಿಯ ಆದಾಯ ₹ 26,311 ಕೋಟಿ ಆಗಿತ್ತು.

ಪ್ರಸಕ್ತ ಹಣಕಾಸು ವರ್ಷದಲ್ಲಿ ಕಂಪನಿಯ ಆದಾಯದ ಬೆಳವಣಿಗೆ ಪ್ರಮಾಣವು ಶೇ 13ರಿಂದ ಶೇ 15ರ ಮಟ್ಟದಲ್ಲಿ ಇರಲಿದೆ ಎಂದು ಅಂದಾಜಿಸಲಾಗಿದೆ. ‘ನಮ್ಮ ಗ್ರಾಹಕರ ವಿಶ್ವಾಸದ ಕಾರಣದಿಂದಾಗಿ ನಮ್ಮ ಮಾರುಕಟ್ಟೆ ಪಾಲು ಹೆಚ್ಚಳ ಆಗುತ್ತಿದೆ’ ಎಂದು ಇನ್ಫೊಸಿಸ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸಲೀಲ್ ಪಾರೇಖ್ ಹೇಳಿದ್ದಾರೆ.

2021–22ನೇ ಸಾಲಿಗೆ ಷೇರುದಾರರಿಗೆ ಪ್ರತಿ ಷೇರಿಗೆ ₹ 16 ಲಾಭಾಂಶ ನೀಡಲು ಕಂಪನಿಯ ಆಡಳಿತ ಮಂಡಳಿ ಶಿಫಾರಸು ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT