ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ಫೊಸಿಸ್‌: ‘ಸೆಬಿ’ ಸಹಕಾರ ಕೋರಿದ ‘ಎಸ್‌ಇಸಿ’

Last Updated 25 ಅಕ್ಟೋಬರ್ 2019, 17:52 IST
ಅಕ್ಷರ ಗಾತ್ರ

ನವದೆಹಲಿ: ಇನ್ಫೊಸಿಸ್‌ ವಿರುದ್ಧ ಕೇಳಿಬಂದಿರುವ ಲೆಕ್ಕಪತ್ರ ಅಕ್ರಮ ಆರೋಪಗಳ ತನಿಖೆಗೆ ಸಂಬಂಧಿಸಿದಂತೆ ಅಮೆರಿಕದ ಸೆಕ್ಯುರಿಟೀಸ್‌ ಆ್ಯಂಡ್‌ ಎಕ್ಸ್‌ಚೇಂಜ್‌ ಕಮಿಷನ್‌ (ಎಸ್‌ಇಸಿ), ಭಾರತದ ಷೇರುಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಸಹಕಾರ ಕೋರಲಿದೆ.

ತನ್ನಿಂದ ಸಾಧ್ಯವಿರುವ ಎಲ್ಲ ಬಗೆಯ ನೆರವನ್ನು ‘ಸೆಬಿ’ ಒದಗಿಸಿಕೊಡಲಿದೆ ಎಂದು ಮೂಲಗಳು ತಿಳಿಸಿವೆ.

ದೇಶದ ಎರಡನೆ ಅತಿದೊಡ್ಡ ಸಾಫ್ಟ್‌ವೇರ್‌ ರಫ್ತು ಸೇವಾ ಸಂಸ್ಥೆಯಾಗಿರುವ ಇನ್ಫೊಸಿಸ್‌ನ ಷೇರುಗಳು ಭಾರತ ಮತ್ತು ಅಮೆರಿಕದ (ಅಮೆರಿಕನ್‌ ಡೆಪಾಸಿಟರಿ ರಿಸಿಪ್ಟ್‌– ಎಡಿಆರ್‌) ಷೇರುಪೇಟೆಗಳಲ್ಲಿ ವಹಿವಾಟು ನಡೆಸುತ್ತಿವೆ. ಅಮೆರಿಕದ ಹೂಡಿಕೆದಾರರಿಗೆ ಆಗಿರುವ ನಷ್ಟ ವಸೂಲಿ ಮಾಡಲು ಸ್ಥಳೀಯವಾಗಿ ಕಂಪನಿ ವಿರುದ್ಧ ಮೊಕದ್ದಮೆ ಹೂಡಲಾಗಿದೆ.

‘ಸೆಬಿ’ಯ ಸಹಕಾರಿ ಕೋರಿರುವ ಬಗ್ಗೆ ‘ಎಸ್‌ಇಸಿ’ಗೆ ಸುದ್ದಿಸಂಸ್ಥೆ ಕಳಿಸಿದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ಬಂದಿಲ್ಲ.

ಕಂಪನಿಯ ಉನ್ನತ ಅಧಿಕಾರಿಗಳು ವರಮಾನ ಮತ್ತು ಲಾಭ ಹೆಚ್ಚಿಸಲು ಲೆಕ್ಕಪತ್ರಗಳಲ್ಲಿ ಅಕ್ರಮಗಳನ್ನು ಎಸಗಿದ್ದಾರೆ ಎಂದು ಇನ್ಫೊಸಿಸ್‌ ಸಿಬ್ಬಂದಿ ಎಂದು ಹೇಳಿಕೊಂಡಿರುವ ಅನಾಮಧೇಯರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT