ನವದೆಹಲಿ: ತನ್ನ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗಾಗಿ ಬೆಂಗಳೂರು ಮತ್ತು ಪುಣೆಯಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ಆರಂಭಿಸಿರುವುದಾಗಿ ಇನ್ಫೊಸಿಸ್ ತಿಳಿಸಿದೆ. ಅಲ್ಲದೆ, ತನ್ನ ಪ್ರಮುಖ ಶಾಖೆಗಳು ಇರುವ ಇತರ ಕಡೆಗಳಲ್ಲಿಯೂ ಇಂತಹ ಕೇಂದ್ರಗಳನ್ನು ಆರಂಭಿಸುವ ಪ್ರಕ್ರಿಯೆ ನಡೆದಿದೆ ಎಂದು ಹೇಳಿದೆ.
‘ಕೊರೊನಾ ಸೋಂಕಿಗೆ ತುತ್ತಾಗಿರುವ, ಮನೆಯಲ್ಲೇ ಕ್ವಾರೆಂಟೀನ್ ಆಗುವುದಕ್ಕಿಂತ ಹೆಚ್ಚಿನ ಆರೈಕೆಯ ಅಗತ್ಯವಿರುವ ನಮ್ಮ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಬೆಂಬಲವಾಗಿ ನಿಲ್ಲಲು ಈ ಕೇಂದ್ರಗಳನ್ನು ಆರಂಭಿಸಲಾಗಿದೆ’ ಎಂದು ಕಂಪನಿ ಹೇಳಿದೆ.
ಪುಣೆಯ ಕೇಂದ್ರವನ್ನು ರುಬಿ ಹಾಲ್ ಆಸ್ಪತ್ರೆ ಹಾಗೂ ಬೆಂಗಳೂರಿನ ಕೇಂದ್ರವನ್ನು ಮಣಿಪಾಲ್ ಆಸ್ಪತ್ರೆ ನಿಭಾಯಿಸಲಿದೆ. ಕಂಪನಿಯು ತನ್ನ ಕೆಲವು ಕ್ಯಾಂಪಸ್‌ಗಳಲ್ಲಿ ಲಸಿಕೆ ನೀಡುವ ವ್ಯವಸ್ಥೆಯನ್ನೂ ಕಲ್ಪಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.