ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲಸೌಕರ್ಯ ವಲಯದ ₹ 1.62 ಲಕ್ಷ ಕೋಟಿ ಮೌಲ್ಯದ ಆಸ್ತಿ ನಗದೀಕರಣ: ಕೇಂದ್ರ

Last Updated 8 ಆಗಸ್ಟ್ 2022, 11:35 IST
ಅಕ್ಷರ ಗಾತ್ರ

ನವದೆಹಲಿ: ‘ಮೂಲಸೌಕರ್ಯ ವಲಯದ ₹ 1.62 ಲಕ್ಷ ಕೋಟಿ ಮೌಲ್ಯದ ಆಸ್ತಿಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ನಗದೀಕರಿಸಲಾಗುವುದು’ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್‌ ಚೌಧರಿ ತಿಳಿಸಿದ್ದಾರೆ.

ಈ ಕುರಿತು ಅವರು ಸೋಮವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ. ‘2021–22ನೆಯ ಹಣಕಾಸು ವರ್ಷದಲ್ಲಿ ₹ 97 ಸಾವಿರ ಕೋಟಿ ಮೌಲ್ಯದ ಆಸ್ತಿಗಳನ್ನು ನಗದೀಕರಿಸಲಾಗಿದೆ’ ಎಂದು ಹೇಳಿದ್ದಾರೆ.

‘ಪ್ರಸಕ್ತ ಹಣಕಾಸು ವರ್ಷದಲ್ಲಿ, ರಾಷ್ಟ್ರೀಯ ಹೆದ್ದಾರಿಗಳ ಕಾರ್ಯಾಚರಣೆಯನ್ನು ಖಾಸಗಿಯವರಿಗೆ ದೀರ್ಘಾವಧಿಗೆ ಗುತ್ತಿಗೆ ನೀಡುವುದು, ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆಗೆ ಸಂಬಂಧಿಸಿದ ಸ್ವತ್ತುಗಳ ಮಾರಾಟ, ಸರ್ಕಾರಿ–ಖಾಸಗಿ ಸಹಭಾಗಿತ್ವದ (ಪಿಪಿಪಿ) ಮೂಲಕ ವಿಮಾನ ನಿಲ್ದಾಣಗಳ ಗುತ್ತಿಗೆ, ಟವರ್‌ ಮತ್ತು ಗಣಿಗಾರಿಕೆ ಸ್ವತ್ತುಗಳ ನಗದೀಕರಣ ಸೇರಿದಂತೆ ಹಲವು ಸ್ವತ್ತುಗಳನ್ನು ನಗದೀಕರಿಸುವ ಉದ್ದೇಶ ಇದೆ’ ಎಂದು ಅವರು ತಿಳಿಸಿದ್ದಾರೆ.

ದೇಶದ ಮೂಲಸೌಕರ್ಯ ವಲಯದ ಯೋಜನೆಗಳಿಗೆ ಅನುದಾನ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಳೆದ ವರ್ಷ ‌₹ 6 ಲಕ್ಷ ಕೋಟಿ ಮೊತ್ತದ ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆಯನ್ನು (ಎನ್‌ಎಂಪಿ) ಘೋಷಿಸಿದೆ.

ಯೋಜನೆಯ ಅಡಿ ಗುರುತಿಸಿರುವ ವಲಯಗಳೆಂದರೆ; ಬಂದರು, ವಿಮಾನ ನಿಲ್ದಾಣ, ರೈಲ್ವೆ, ಗೋದಾಮು, ಅನಿಲ ಮತ್ತು ಕೊಳವೆ ಮಾರ್ಗ, ವಿದ್ಯುತ್ ಉತ್ಪಾದನೆ ಮತ್ತು ಸರಬರಾಜು, ಗಣಿಗಾರಿಕೆ, ದೂರಸಂಪರ್ಕ, ಕ್ರೀಡಾಂಗಣ, ನಗರದ ರಿಯಲ್‌ ಎಸ್ಟೇಟ್‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT