ನವದೆಹಲಿ: ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ ಸೇರಿ ಪ್ರಮುಖ ಎಂಟು ಮೂಲಸೌಕರ್ಯ ವಲಯದ ಬೆಳವಣಿಗೆಯು ಅಕ್ಟೋಬರ್ನಲ್ಲಿ ಶೇ 3.1ರಷ್ಟು ಕುಸಿದಿದೆ.

ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ 12.7ರಷ್ಟು ಏರಿಕೆ ಕಂಡಿತ್ತು. ಈ ವಲಯಗಳು ಕೈಗಾರಿಕಾ ಉತ್ಪಾದನಾ ಸೂಚ್ಯಂಕಕ್ಕೆ (ಐಐಪಿ) ಶೇ 40.27ರಷ್ಟು ಕೊಡುಗೆ ನೀಡುತ್ತವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಸೆಪ್ಟೆಂಬರ್ನಲ್ಲಿ ಶೇ 2.4ರಷ್ಟು ಬೆಳವಣಿಗೆ ದಾಖಲಾಗಿತ್ತು.

ಅಕ್ಟೋಬರ್ನಲ್ಲಿ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಉತ್ಪಾದನೆಯು ಗಣನೀಯವಾಗಿ ಕುಸಿದಿದೆ. ಕಲ್ಲಿದ್ದಲು ಶೇ 7.8, ಉಕ್ಕು ಶೇ 0.4, ಸಿಮೆಂಟ್ ಶೇ 4.2 ಮತ್ತು ವಿದ್ಯುತ್ ಉತ್ಪಾದನೆಯು ಶೇ 0.6ರಷ್ಟು ಆಗಿದೆ.

ರಿಫೈನರಿ ಉತ್ಪನ್ನದ ಬೆಳವಣಿಗೆಯು ಶೇ 5.2ರಷ್ಟು ಏರಿಕೆಯಾಗಿದೆ.

ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್ನಿಂದ ಅಕ್ಟೋಬರ್ವರೆಗೆ ಈ ಮೂಲಸೌಕರ್ಯ ವಲಯಗಳ ಬೆಳವಣಿಗೆಯು ಶೇ 4.1ರಷ್ಟು ದಾಖಲಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ 8.8ರಷ್ಟು ಇತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.