ಶುಕ್ರವಾರ, ಫೆಬ್ರವರಿ 26, 2021
19 °C

ಎಂಎಸ್‌ಎಂಇ ನೆರವಿಗೆ ‘ಇನ್‌ಸ್ಟಾಕ್ಯಾಷ್‌’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್‌ ಬಿಕ್ಕಟ್ಟಿನಿಂದ ಆರ್ಥಿಕ ನಷ್ಟಕ್ಕೆ ಒಳಗಾಗಿರುವ ಕಿರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆ (ಎಂಎಸ್‌ಎಂಇ) ವಲಯಕ್ಕೆ ನೆರವಾಗಲು ಇನ್‌ಸ್ಟಾಮೊಜೊ ಕಂಪನಿಯು ‘ಇನ್‌ಸ್ಟಾಕ್ಯಾಷ್‌’ ಯೋಜನೆಗೆ ಚಾಲನೆ ನೀಡಿದೆ.

ವಹಿವಾಟನ್ನು ಮುಂದುವರಿಸಿಕೊಂಡು ಹೋಗಲು ಅಗತ್ಯವಿರುವ ದುಡಿಯುವ ಬಂಡವಾಳವನ್ನು ತಕ್ಷಣವೇ ಒದಗಿಸುವ ಯೋಜನೆ ಇದಾಗಿದೆ. ಏಳರಿಂದ 14 ದಿನಗಳ ಅವಧಿಗೆ ₹ 1 ಲಕ್ಷದವರೆಗೆ ಸಾಲ ಪಡೆಯಬಹುದಾಗಿದೆ. ಗ್ರಾಹಕರ ಖಾತೆಗೆ ಹಣ ವರ್ಗಾವಣೆ ಆಗಲಿದೆ. ಸದ್ಯದ ಮಟ್ಟಿಗೆ ಸಾಲ ಸೌಲಭ್ಯ ಒದಗಿಸುವ ಪ್ರಕ್ರಿಯೆಗೆ ಕನಿಷ್ಠ ಶುಲ್ಕವನ್ನಷ್ಟೇ ಪಡೆಯಲಾಗುತ್ತಿದೆ ಎಂದು ಕಂಪನಿ ಹೇಳಿದೆ. ಆದರೆ ಶುಲ್ಕದ ಪ್ರಮಾಣವನ್ನು ತಿಳಿಸಿಲ್ಲ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು