ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಟೆಲ್‌ನಿಂದ ಬೆಂಗಳೂರಿನಲ್ಲಿ ಹೊಸ ಎಂಜಿನಿಯರಿಂಗ್ ಕೇಂದ್ರ

Last Updated 24 ಜೂನ್ 2022, 12:17 IST
ಅಕ್ಷರ ಗಾತ್ರ

ಬೆಂಗಳೂರು: ಇಂಟೆಲ್‌ ಇಂಡಿಯಾ ಕಂಪನಿಯು ಬೆಂಗಳೂರಿನಲ್ಲಿ ಆಧುನಿಕ ಸೌಲಭ್ಯ ಹೊಂದಿರುವ ಹೊಸ ವಿನ್ಯಾಸ ಮತ್ತು ಎಂಜಿನಿಯರಿಂಗ್‌ ಕೇಂದ್ರವನ್ನು ಆರಂಭಿಸಿದೆ.

ಇದು ಅಮೆರಿಕದಿಂದ ಹೊರಗೆ ಇಂಟೆಲ್ ಸ್ಥಾಪಿಸಿರುವ ಅತಿದೊಡ್ಡ ವಿನ್ಯಾಸ ಹಾಗೂ ಎಂಜಿನಿಯರಿಂಗ್ ಕೇಂದ್ರ ಎಂದು ಕಂಪನಿ ತಿಳಿಸಿದೆ.

ಬೆಳ್ಳಂದೂರು ಬಳಿಯ ಇಕೊಸ್ಪೇಸ್‌ ಬಿಸಿನೆಸ್‌ ಪಾರ್ಕ್‌ನಲ್ಲಿ 4.53 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಇದು ನಿರ್ಮಾಣಗೊಂಡಿದೆ. ಡೇಟಾ ಸೆಂಟರ್, ಐಒಟಿ, ಗ್ರಾಫಿಕ್ಸ್, ಕೃತಕ ಬುದ್ಧಿಮತ್ತೆ ಮತ್ತು ಆಟೊಮೊಟಿವ್ ವಲಯಗಳಿಗೆ ಸುಧಾರಿತ ಅತ್ಯಾಧುನಿಕ ವಿನ್ಯಾಸ ಹಾಗೂ ಎಂಜಿನಿಯರಿಂಗ್ ಕೆಲಸಕ್ಕೆ ಈ ಕೇಂದ್ರವು ನೆರವಾಗಲಿದೆ ಎಂದು ಕಂಪನಿಯು ತಿಳಿಸಿದೆ.

ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಐ.ಟಿ. ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಈ ಕೇಂದ್ರವನ್ನು ಉದ್ಘಾಟಿಸಿದರು. ರಾಜ್ಯ ಸರ್ಕಾರದ ಐ.ಟಿ., ಬಿ.ಟಿ. ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಇಂಟೆಲ್ ಇಂಡಿಯಾ ಮುಖ್ಯಸ್ಥೆ ನಿವೃತಿ ರಾಯ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT