ನವದೆಹಲಿ: 2023-24ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕಕ್ಕೆ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರಗಳನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದೆ. ಅದರ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.
ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಕ್ಕೆ (ಎನ್‌ಎಸ್‌ಸಿ) ನೀಡಲಾಗುತ್ತಿದ್ದ ಬಡ್ಡಿ ಶೇ 7.0 ನಿಂದ ಶೇ 7.7ಕ್ಕೆ ಏರಿಕೆಯಾಗಿದೆ. ಮಾಸಿಕ ಆದಾಯ ಖಾತೆ ಯೋಜನೆಗೆ ಶೇ 7.1 ರಿಂದ ಶೇ 7.4ಕ್ಕೆ ಬಡ್ಡಿಯನ್ನು ಹೆಚ್ಚಿಸಲಾಗಿದೆ. ಐದು ವರ್ಷಗಳ ಠೇವಣಿಗೆ ಈಗ ಅಸ್ತಿತ್ವದಲ್ಲಿರುವ ಶೇ 7.0 ಬದಲಿಗೆ ಶೇ 7.5ರಷ್ಟು ಬಡ್ಡಿ ಸಿಗಲಿದೆ.
ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಮೇಲಿನ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸುಕನ್ಯಾ ಸಮೃದ್ಧಿ ಯೋಜನೆ ಮೇಲಿನ ಬಡ್ಡಿಯನ್ನು ಶೇ 7.6ರಿಂದ ಶೇ 8ಕ್ಕೆ ಹೆಚ್ಚಿಸಲಾಗಿದೆ.
ಹಣದುಬ್ಬರ ನಿಯಂತ್ರಿಸುವ ಉದ್ದೇಶದಿಂದ ಆರ್‌ಬಿಐ ರೆಪೊ ದರವನ್ನು ಒಂದು ವರ್ಷದಲ್ಲಿ ಶೇ 2.5ರಷ್ಟು ಹೆಚ್ಚಿಸಿದೆ. ಬ್ಯಾಂಕ್‌ಗಳು ಕೂಡ ಠೇವಣಿ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.