ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರದ ವಹಿವಾಟು: ಹೂಡಿಕೆದಾರರ ಸಂಪತ್ತು ₹ 5 ಲಕ್ಷ ಕೋಟಿ ವೃದ್ಧಿ

Last Updated 13 ನವೆಂಬರ್ 2021, 11:28 IST
ಅಕ್ಷರ ಗಾತ್ರ

ಬೆಂಗಳೂರು: ದೇಶದ ಷೇರುಪೇಟೆಗಳ ವಾರದ ವಹಿವಾಟು ಸಕಾರಾತ್ಮಕವಾಗಿ ಅಂತ್ಯ ಕಂಡಿದ್ದು, ಮುಂಬೈ ಷೇರುಪೇಟೆಯ (ಬಿಎಸ್‌ಇ) ಹೂಡಿಕೆದಾರರ ಸಂಪತ್ತು ಮೌಲ್ಯವು ₹ 5.14 ಲಕ್ಷ ಕೋಟಿಗಳಷ್ಟು ವೃದ್ಧಿಯಾಗಿದೆ. ಇದರಿಂದಾಗಿ ಮುಂಬೈ ಷೇರುಪೇಟೆಯಲ್ಲಿ ನೋಂದಾಯಿತ ಕಂಪನಿಗಳ ಒಟ್ಟಾರೆ ಮಾರುಕಟ್ಟೆ ಬಂಡವಾಳ ಮೌಲ್ಯವು ₹ 270.14 ಲಕ್ಷ ಕೋಟಿಗಳಿಗೆ ಏರಿಕೆ ಆಗಿದೆ.

ವಾರದ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್‌ 619 ಅಂಶಗಳಷ್ಟು ಏರಿಕೆ ಕಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 186 ಅಂಶ ಹೆಚ್ಚಾಗಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ವಾರದ ವಹಿವಾಟಿನ ಅವಧಿಯಲ್ಲಿ ಮಾರಾಟಕ್ಕೆ ಹೆಚ್ಚಿನ ಗಮನ ನೀಡಿದ್ದಾರೆ. ಷೇರುಪೇಟೆಯಿಂದ ₹ 2,967 ಕೋಟಿಗೂ ಹೆಚ್ಚಿನ ಮೊತ್ತವನ್ನು ಹಿಂದಕ್ಕೆ ಪಡೆದಿದ್ದಾರೆ.

ಹಣದುಬ್ಬರ ಮತ್ತು ಕೈಗಾರಿಕಾ ಉತ್ಪಾದನೆಯ ಅಂಕಿ–ಅಂಶಗಳು ಸೋಮವಾರ ಷೇರುಪೇಟೆಗಳ ವಹಿವಾಟಿನ ಮೇಲೆ ಪ್ರಭಾವ ಬೀರಲಿವೆ. ತ್ರೈಮಾಸಿಕ ಫಲಿತಾಂಶ ಪ್ರಕಟಣೆ ಸದ್ಯಕ್ಕೆ ಇಲ್ಲದೇ ಇರುವುದರಿಂದ ನಂತರದ ದಿನಗಳಲ್ಲಿ ದೇಶಿ ಷೇರುಪೇಟೆಗಳು ಜಾಗತಿಕ ಮಾರುಕಟ್ಟೆಗಳ ಪ್ರಭಾವಕ್ಕೆ ಒಳಗಾಗಲಿವೆ ಎಂದು ರೆಲಿಗೇರ್‌ ಬ್ರೋಕಿಂಗ್‌ನ ಸಂಶೋಧನಾ ವಿಭಾಗದ ಉಪಾಧ್ಯಕ್ಷ ಅಜಿತ್‌ ಮಿಶ್ರಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT