ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಪ್ಟೆಂಬರ್‌ ತ್ರೈಮಾಸಿಕ: ಐಒಸಿ ಲಾಭ ₹ 6,360 ಕೋಟಿ

Last Updated 30 ಅಕ್ಟೋಬರ್ 2021, 10:50 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ (ಐಒಸಿ) ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹ 6,360 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 6,227 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ಈ ಅವಧಿಯಲ್ಲಿ ವರಮಾನವು ಶೇ 46ರಷ್ಟು ಹೆಚ್ಚಾಗಿ ₹ 1.69 ಲಕ್ಷ ಕೋಟಿಗಳಿಗೆ ತಲಿಪಿದೆ ಎಂದು ಅದು ಹೇಳಿದೆ.ಇಂಧನ ಮಾರಾಟವು 1.77 ಕೋಟಿ ಟನ್‌ಗಳಿಂದ ₹ 1.9 ಕೋಟಿ ಟನ್‌ಗಳಿಗೆ ಏರಿಕೆ ಆಗಿದೆ.

ಪ್ರಸಕ್ತ ಹಣಕಾಸು ವರ್ಷದ ಮೊದಲಾರ್ಧದಲ್ಲಿ ನಿವ್ವಳ ಲಾಭ ಶೇ 51ರಷ್ಟು ಹೆಚ್ಚಾಗಿ ₹ 12,301 ಕೋಟಿಗಳಿಗೆ ತಲುಪಿದೆ. ವರಮಾನವು ₹ 2.04 ಲಕ್ಷ ಕೋಟಿಗಳಿಂದ ₹ 3.24 ಲಕ್ಷ ಕೋಟಿಗಳಿಗೆ ಏರಿಕೆ ಕಂಡಿದೆ ಎಂದು ಮಾಹಿತಿ ನೀಡಿದೆ.

2021–22ನೇ ಹಣಕಾಸು ವರ್ಷಕ್ಕೆ ಪ್ರತಿ ಷೇರಿಗೆ ₹ 5 ಮಧ್ಯಂತರ ಲಾಭಾಂಶ ನೀಡಲು ಆಡಳಿತ ಮಂಡಳಿಯು ಒಪ್ಪಿಗೆ ನೀಡಿರುವುದಾಗಿ ‘ಐಒಸಿ’ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT