ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಒಸಿಗೆ ₹8,063 ಕೋಟಿ ಲಾಭ

Published 24 ಜನವರಿ 2024, 16:20 IST
Last Updated 24 ಜನವರಿ 2024, 16:20 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತೀಯ ತೈಲ ನಿಗಮವು (ಐಒಸಿ) 2023–24ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹8,063 ಕೋಟಿ ನಿವ್ವಳ ಲಾಭ ಗಳಿಸಿದೆ.

ಕಳೆದ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹448.1 ಕೋಟಿ ಲಾಭ ಗಳಿಸಿತ್ತು. ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹12,967.32 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಮೂರನೇ ತ್ರೈಮಾಸಿಕದಲ್ಲಿ ಆದಾಯ ಕಡಿಮೆಯಾಗಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

2022-23ರಲ್ಲಿ ಕಚ್ಚಾ ತೈಲದ ದರ ಗರಿಷ್ಠ ಮಟ್ಟದಲ್ಲಿ ಇದ್ದಾಗ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿರಲಿಲ್ಲ. ಆಗ ಆಗಿದ್ದ ನಷ್ಟವನ್ನು ತುಂಬಿಕೊಳ್ಳಲಾಗಿದೆ ಎಂದು ಕಂಪನಿ ತಿಳಿಸಿದೆ.

ಪೆಟ್ರೋಲಿಯಂ ಉತ್ಪನ್ನಗಳ ಮಾರಾಟದಿಂದ ಬರುವ ತೆರಿಗೆ ಪೂರ್ವದ ಲಾಭವು ಹೆಚ್ಚಳವಾಗಿದೆ. ಹಿಂದಿನ ವರ್ಷ ಇದೇ ಅವಧಿಯಲ್ಲಿ ₹1,541.95 ಕೋಟಿ ಇದ್ದಿದ್ದು, ಈ ತ್ರೈಮಾಸಿಕದಲ್ಲಿ ₹11,428.88 ಕೋಟಿಗೆ ಏರಿಕೆ ಆಗಿದೆ ಎಂದು ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT