ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಒಸಿ: ₹ 1.04 ಲಕ್ಷ ಕೋಟಿ ಮೊತ್ತದ ಯೋಜನೆಗಳ ಮರು ಚಾಲನೆ

Last Updated 8 ಜುಲೈ 2020, 14:26 IST
ಅಕ್ಷರ ಗಾತ್ರ

ನವದೆಹಲಿ: ಲಾಕ್‌ಡೌನ್‌ ನಿರ್ಬಂಧಗಳು ಸಡಿಲಗೊಳ್ಳುತ್ತಿರುವುದರಿಂದ ₹ 1.04 ಲಕ್ಷ ಕೋಟಿ ಮೊತ್ತದ ಯೋಜನೆಗಳಿಗೆ ಮರು ಚಾಲನೆ ನೀಡಿರುವುದಾಗಿ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ (ಐಒಸಿ) ತಿಳಿಸಿದೆ.

ಭವಿಷ್ಯದ ಇಂಧನ ಬೇಡಿಕೆ ಪೂರೈಸಲು ಮತ್ತು ಉದ್ಯೋಗ ಸೃಷ್ಟಿಸುವ ಮೂಲಕ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಇದು ಪೂರಕವಾಗಿದೆ.₹1.04 ಲಕ್ಷ ಕೋಟಿ ಮೊತ್ತದ 336 ಯೋಜನೆಗಳೀಗೆ ಮತ್ತೆ ಚಾಲನೆ ನೀಡಲಾಗಿದೆ ಎಂದೂ ಹೇಳಿದೆ.

ಕೋವಿಡ್‌ ಬಿಕ್ಕಟ್ಟಿನಿಂದ ಆರ್ಥಿಕತೆ ಮೇಲಾಗಿರುವ ಪರಿಣಾಮ ನಿವಾರಿಸಲು ಬಂಡವಾಳ ಹೂಡಿಕೆ ಮಾಡುವಂತೆ ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ ಕಂಪನಿಗಳಿಗೆ ಸೂಚಿಸಿದೆ.

2020–21ನೇ ಹಣಕಾಸು ವರ್ಷದಲ್ಲಿ ₹ 26,143 ಕೋಟಿ ಬಂಡವಾಳ ವೆಚ್ಚ ಮಾಡುವ ಹಾದಿಯಲ್ಲಿ ಕಂಪನಿಯು ಸಾಗುತ್ತಿದೆ. ಮೊದಲ ತ್ರೈಮಾಸಿಕದಲ್ಲಿ ₹2,674 ಕೋಟಿ ಹೂಡಿಕೆ ಮಾಡಲಾಗಿದೆ. ದೀರ್ಘಾವಧಿಯ ಬಂಡವಾಳ ವೆಚ್ಚವು ದೇಶದ ಬೇಡಿಕೆಯನ್ನು ಆಧರಿಸಿ ನಿರ್ಧಾರವಾಗಲಿದೆ ಎಂದೂ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT