ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿಯಲ್ಲಿ ಜಮೀನು ಖರೀದಿಸಿದ ಫಾಕ್ಸ್‌ಕಾನ್

Published 9 ಮೇ 2023, 15:52 IST
Last Updated 9 ಮೇ 2023, 15:52 IST
ಅಕ್ಷರ ಗಾತ್ರ

ಬೆಂಗಳೂರು (ಎಎಫ್‌ಪಿ): ತೈವಾನ್ ಮೂಲದ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕಾ ಕಂಪನಿ ಫಾಕ್ಸ್‌ಕಾನ್‌ ತಾನು ಬೆಂಗಳೂರಿನ ಹೊರವಲಯದಲ್ಲಿ ಜಮೀನು ಖರೀದಿಸಿರುವುದಾಗಿ ಲಂಡನ್ ಷೇರುಪೇಟೆಗೆ ಮಂಗಳವಾರ ಮಾಹಿತಿ ನೀಡಿದೆ.

ಫಾಕ್‌ಕಾನ್‌ ಕಂಪನಿಯು ಆ್ಯಪಲ್‌ ಕಂಪನಿಗೆ ಐಫೋನ್‌ಗಳನ್ನು ಸಿದ್ಧಪಡಿಸಿ ಕೊಡುತ್ತದೆ. ಫಾಕ್ಸ್‌ಕಾನ್‌ ಕಂಪನಿಯು ದೇವನಹಳ್ಳಿಯಲ್ಲಿ, ವಿಮಾನ ನಿಲ್ದಾಣದ ಸಮೀಪದಲ್ಲಿ ಸರಿಸುಮಾರು 296 ಎಕರೆ ಜಮೀನು ಖರೀದಿ ಮಾಡಿದೆ. ಈ ಜಮೀನಿಗೆ ಅದು ತನ್ನ ಅಂಗಸಂಸ್ಥೆಯ ಮೂಲಕ ₹ 303 ಕೋಟಿ ಪಾವತಿಸಲಿದೆ.

ಆ್ಯಪಲ್‌ ಕಂಪನಿಯು ಭಾರತದಲ್ಲಿ ಹೆಚ್ಚಿನ ಮಾರುಕಟ್ಟೆ ಪಾಲು ಹೊಂದಲು ಯತ್ನ ನಡೆಸಿದೆ. ಕಂಪನಿಯ ಸಿಇಒ ಟಿಮ್ ಕುಕ್ ಅವರು ಈಚೆಗೆ ಭಾರತಕ್ಕೆ ಭೇಟಿ ನೀಡಿ, ಆ್ಯಪಲ್‌ನ ಎರಡು ರಿಟೇಲ್‌ ಮಳಿಗೆಗಳನ್ನು ಉದ್ಘಾಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT