ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಸಿದಾರರ ವಿಡಿಯೊ ಕೆವೈಸಿಗೆ ಐಆರ್‌ಡಿಎಐ ಒಪ್ಪಿಗೆ

Last Updated 21 ಸೆಪ್ಟೆಂಬರ್ 2020, 15:51 IST
ಅಕ್ಷರ ಗಾತ್ರ

ನವದೆಹಲಿ: ವಿಡಿಯೊ ಆಧಾರಿತ ಗುರುತು ಪ್ರಕ್ರಿಯೆ (ವಿಬಿಐಪಿ) ಮೂಲಕ ಗ್ರಾಹಕರ ಕೆವೈಸಿ ಪೂರ್ಣಗೊಳಿಸಲು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು (ಐಆರ್‌ಡಿಎಐ) ಜೀವ ವಿಮೆ ಮತ್ತು ಸಾಮಾನ್ಯ ವಿಮೆ ಕಂಪನಿಗಳಿಗೆ ಒಪ್ಪಿಗೆ ನೀಡಿದೆ.

ಕೋವಿಡ್‌–19 ಪಿಡುಗಿನ ಸಂದರ್ಭದಲ್ಲಿ ವಿಮಾ ಕಂಪನಿಗಳ ಅಧಿಕಾರಿಗಳಿಗೆ ಇದರಿಂದ ಅನುಕೂಲ ಆಗಲಿದೆ. ಕೆವೈಸಿ ಪ್ರಕ್ರಿಯೆಯನ್ನು ಸರಳಗೊಳಿಸುವುದು ಮತ್ತು ಅದನ್ನು ಗ್ರಾಹಕ ಸ್ನೇಹಿಯಾಗಿ ಮಾಡುವುದು ‘ವಿಬಿಐಪಿ’ ಉದ್ದೇಶ ಎಂದು ಪ್ರಾಧಿಕಾರ ತಿಳಿಸಿದೆ.

ವಿಮಾ ಕಂಪನಿಗಳು ಅಪ್ಲಿಕೇಷನ್‌ ಅಭಿವೃದ್ಧಿಪಡಿಸುವ ಮೂಲಕ ಆನ್‌ಲೈನ್‌ ಅಥವಾ ವಿಡಿಯೊ ಮೂಲಕ ಗ್ರಾಹಕರ ಕೆವೈಸಿಯನ್ನು ಪ್ರಮಾಣೀಕರಿಸುವಂತೆ ಅದು ತಿಳಿಸಿದೆ. ಮುಖ ಚಹರೆ ಗುರುತಿಸುವ ತಂತ್ರಜ್ಞಾನ ಮತ್ತುಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಕೆವೈಸಿ ಪಡೆಯುವಂತೆ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT