ಮಂಗಳವಾರ, 20 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ವರ್ಷದಲ್ಲಿ ₹5,095 ಕೋಟಿ ಮೌಲ್ಯದ ಆಸ್ತಿ ಜಪ್ತಿ 

Published 18 ಡಿಸೆಂಬರ್ 2023, 16:17 IST
Last Updated 18 ಡಿಸೆಂಬರ್ 2023, 16:17 IST
ಅಕ್ಷರ ಗಾತ್ರ

ನವದೆಹಲಿ: ಆದಾಯ ತೆರಿಗೆ ಇಲಾಖೆಯು (ಐ.ಟಿ) 2019–20ರಿಂದ 2022-23ರವರೆಗೆ ನಡೆಸಿದ ಒಟ್ಟು 2,980 ದಾಳಿ ಪ್ರಕರಣಗಳಲ್ಲಿ ₹5,095 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದೆ ಎಂದು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್‌ ಚೌಧರಿ ತಿಳಿಸಿದ್ದಾರೆ.

ಸೋಮವಾರ ಲೋಕಸಭೆಗೆ ಅವರು ಈ ಮಾಹಿತಿ ನೀಡಿದ್ದಾರೆ. 

2019–20ರಲ್ಲಿ ಒಟ್ಟು 984 ದಾಳಿ ನಡೆಸಿದ್ದು, ₹1,289 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. 365 ಜನರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದ್ದಾರೆ.

2020–21ರಲ್ಲಿ 569 ದಾಳಿ ನಡೆಸಿದ್ದು, ₹881 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. 2021–22ರಲ್ಲಿ 689 ದಾಳಿ ನಡೆಸಿದ್ದು, ₹1,159 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. 2022–23ರಲ್ಲಿ 741 ದಾಳಿ ನಡೆಸಿದ್ದು, ₹1,765 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT