ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೆಸ್‌ ಬ್ಯಾಂಕ್‌ ಸ್ಥಾಪಕನ ಮನೆ ಮೇಲೆ ಇಡಿ ದಾಳಿ

Last Updated 7 ಮಾರ್ಚ್ 2020, 2:00 IST
ಅಕ್ಷರ ಗಾತ್ರ

ಮುಂಬೈ: ಯೆಸ್‌ ಬ್ಯಾಂಕ್‌ ಸ್ಥಾಪಕ ರಾಣಾ ಕಪೂರ್‌ ಅವರ ಇಲ್ಲಿನ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಶುಕ್ರವಾರ ರಾತ್ರಿ ಶೋಧ ನಡೆಸಿದರು.

ಅವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ(ಪಿಎಂಎಲ್‌ಎ) ಹೆಚ್ಚಿನ ಸಾಕ್ಷ್ಯ ಸಂಗ್ರಹಿಸಲು ಈ ದಾಳಿ ನಡೆಸಲಾಗಿದೆ.

ಬ್ಯಾಂಕ್‌ನ ಆರ್ಥಿಕ ಮುಗ್ಗಟ್ಟಿಗೆ ಇತರ ಕಾರಣಗಳ ಜೊತೆಗೆಉನ್ನತ ಅಧಿಕಾರಿಗಳ ಅವ್ಯವಹಾರಗಳ ಪಾಲು ಇರುವುದರಿಂದ ಬ್ಯಾಂಕ್‌ನ ನಿರ್ದೇಶಕ ಮಂಡಳಿ ಪುನರ್‌ರಚನೆಗೆ ಸರ್ಕಾರ ಮುಂದಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಹೇಳಿಕೆ ನೀಡಿದ್ದರು. ಈ ಬಿಕ್ಕಟ್ಟಿಗೆ ಕಾರಣರಾದ ತಪ್ಪಿತಸ್ಥರನ್ನು ಗುರುತಿಸಲು ಆರ್‌ಬಿಐ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದರು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಶೋಧ ನಡೆಸಿದೆ.

ಬ್ಯಾಂಕ್‌ ಮೇಲಿನ ನಿರ್ಬಂಧ ಏಪ್ರಿಲ್‌ 3ರವರೆಗೆ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT