ಭಾನುವಾರ, ಸೆಪ್ಟೆಂಬರ್ 19, 2021
29 °C
ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ

ಸಂಜೀವ್ ಪುರಿಗೆ ಐಟಿಸಿ ಸಾರಥ್ಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಐಟಿಸಿ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಸಂಜೀವ್‌ ಪುರಿ ಅವರನ್ನು ನೇಮಿಸಲಾಗಿದೆ.

ವೈ.ಸಿ. ದೇವೇಶ್ವರ್‌ ಅವರ ನಿಧನದಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ, ವ್ಯವಸ್ಥಾಪಕ ನಿರ್ದೇಶಕ ಸಂಜೀವ್‌ ಪುರಿ ಅವರನ್ನು ನೇಮಿಸಿ ಮುಂಬಡ್ತಿ ನೀಡಲಾಗಿದೆ.

ಸೋಮವಾರ ನಡೆದ ನಿರ್ದೇಶಕ ಮಂಡಳಿ ಸಭೆಯಲ್ಲಿ ಈ ನೇಮಕಾತಿ ನಡೆದಿದೆ. ಪುರಿ ಅವರ ಅಧಿಕಾರ ಅವಧಿ ಸೋಮವಾರದಿಂದಲೇ ಜಾರಿಗೆ ಬಂದಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ಲಾಭ ಹೆಚ್ಚಳ: 2018–19ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಐಟಿಸಿ ಲಿಮಿಟೆಡ್‌ನ ನಿವ್ವಳ ಲಾಭ ಶೇ 18.72ರಷ್ಟು ಹೆಚ್ಚಾಗಿ ₹ 3,482 ಕೋಟಿಗೆ ತಲುಪಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ನಿವ್ವಳ ಲಾಭ ₹ 2,932 ಕೋಟಿ ಇತ್ತು.

ಕಂಪನಿಯ ಒಟ್ಟಾರೆ ವರಮಾನ ₹ 11,330 ಕೋಟಿ ಗಳಿಂದ ₹ 12,946 ಕೋಟಿ ಗಳಿಗೆ ಶೇ 14ರಷ್ಟು ಹೆಚ್ಚಾಗಿದೆ.

ಲಾಭಾಂಶ: ಹಣಕಾಸು ವರ್ಷಕ್ಕೆ ಪ್ರತಿ ಷೇರಿಗೆ ₹ 5.75ರಂತೆ ಲಾಭಾಂಶ ನೀಡಲು ಕಂಪನಿಯ ನಿರ್ದೇಶಕ ಮಂಡಳಿ ಶಿಫಾರಸು ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು