ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿಸಿ ಲಾಭ ₹ 2,567 ಕೋಟಿ

Last Updated 25 ಜುಲೈ 2020, 17:57 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಜೂನ್‌ ತ್ರೈಮಾಸಿಕದಲ್ಲಿ ಐಟಿಸಿ ಲಿಮಿಟೆಡ್‌ನ ನಿವ್ವಳ ಲಾಭ ಶೇ 25.30ರಷ್ಟು ಕಡಿಮೆಯಾಗಿದ್ದು, ₹ 2,567 ಕೋಟಿಗೆ (ತೆರಿಗೆ ನಂತರ) ತಲುಪಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ತೆರಿಗೆ ಪಾವತಿಸಿದ ನಂತರದ ನಿವ್ವಳ ಲಾಭ ₹ 3,436.51 ಕೋಟಿ ಇತ್ತು.

ಕೊರೊನಾ ನಿಯಂತ್ರಿಸಲು ಜಾರಿಗೊಳಿಸಿರುವ ಲಾಕ್‌ಡೌನ್‌ ನಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಇದರಿಂದಾಗಿ ಲಾಭದಲ್ಲಿ ಇಳಿಕೆಯಾಗಿದೆ ಎಂದು ಹೇಳಿದೆ. ಕಾರ್ಯಾಚರಣೆಯಿಂದ ಬಂದಿರುವ ವರಮಾನ ₹10,478 ಕೋಟಿ ಆಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 12,658 ಕೋಟಿಗೆ ಹೋಲಿಸಿದರೆ ಶೇ 17ರಷ್ಟು ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT