ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನ– ಧನ್‌: ಸಕ್ರಿಯವಾಗಿರದ 50 ಲಕ್ಷ ಖಾತೆಗಳು

Last Updated 21 ಮಾರ್ಚ್ 2023, 22:40 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನ ಮಂತ್ರಿ ಜನ–ಧನ್‌ ಯೋಜನೆ ಯಡಿ ಕರ್ನಾಟಕದಲ್ಲಿ ಈವರೆಗೆ 1,74,72,330 ಬ್ಯಾಂಕ್‌ ಖಾತೆಗಳನ್ನು ತೆರೆಯಲಾಗಿದ್ದು, ಈ ಪೈಕಿ 1,24,98,492 ಖಾತೆಗಳು ಸಕ್ರಿಯವಾಗಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ನಾರಾಯಣ ಕೊರಗಪ್ಪ ಪ್ರಶ್ನೆಗೆ ಮಂಗಳವಾರ ಲಿಖಿತ ಉತ್ತರ ನೀಡಿರುವ ಹಣಕಾಸು ಖಾತೆಯ ರಾಜ್ಯ ಸಚಿವರಾದ ಡಾ.ಭಾಗವತ್‌ ಕರಾಡ್‌, ’76,77,573 ಮಂದಿ ಪುರುಷರು ಹಾಗೂ 97,94,757 ಮಹಿಳೆಯರು ಖಾತೆ ತೆರೆದಿದ್ದಾರೆ’ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮಹಿಳೆಯರ ಜನ–ಧನ್‌ ಖಾತೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. 2017ರ ಮಾರ್ಚ್‌ ತಿಂಗಳಲ್ಲಿ ಮಹಿಳೆಯರ ಖಾತೆ 50.09 ಲಕ್ಷ ಇತ್ತು. 2023ರ ಫೆಬ್ರುವರಿಗೆ 97.95 ಲಕ್ಷಕ್ಕೆ ಹೆಚ್ಚಳ ಆಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT