ಮಂಗಳವಾರ, ಆಗಸ್ಟ್ 3, 2021
21 °C

ಜೆಟ್‌ ಸ್ವಾಧೀನ: ಕೇಂದ್ರಕ್ಕೆ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ವಿಮಾನಗಳ ಹಾರಾಟ ಸ್ಥಗಿತಗೊಳಿಸಿರುವ ಜೆಟ್‌ ಏರ್‌ವೇಸ್‌ ಸ್ವಾಧೀನಪಡಿಸಿಕೊಳ್ಳಲು ಮುಂದಾಗಬೇಕು ಎಂದು ಬ್ಯಾಂಕ್‌ ಉದ್ಯೋಗಿಗಳ ಸಂಘವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

22 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳ ಹಿತ ರಕ್ಷಿಸಲು ಸರ್ಕಾರ ಈ ನಿರ್ಧಾರಕ್ಕೆ ಬರಬೇಕು ಎಂದು ಅಖಿಲ ಭಾರತ ಬ್ಯಾಂಕ್‌ ಉದ್ಯೋಗಿಗಳ ಸಂಘವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

ಹಣಕಾಸಿನ ಮುಗ್ಗಟ್ಟಿನ ಭಾರಕ್ಕೆ ಕುಸಿದಿರುವ ವಿಮಾನಯಾನ ಸಂಸ್ಥೆಗೆ ಬ್ಯಾಂಕ್‌ಗಳು ಸಾಲ ನೀಡದಂತೆ ನೋಡಿಕೊಳ್ಳಬೇಕು ಎಂದೂ ಪತ್ರದಲ್ಲಿ ಮನವಿ ಮಾಡಲಾಗಿದೆ.

ಸಂಸ್ಥೆಯಲ್ಲಿನ ಪಾಲು ಬಂಡವಾಳ ಮಾರಾಟ ಮಾಡಲು ಬ್ಯಾಂಕ್‌ ಒಕ್ಕೂಟ ಬಿಡ್‌ ಆಹ್ವಾನಿಸಿದೆ. ಈ ಪ್ರಕ್ರಿಯೆ ಯಶಸ್ವಿಯಾಗದಿದ್ದರೆ ಸರ್ಕಾರವೇ ಸಂಸ್ಥೆಯನ್ನು ತನ್ನ ವಶಕ್ಕೆ ಪಡೆದುಕೊಳ್ಳಬೇಕು. ಬ್ಯಾಂಕ್‌ಗಳು ಸಂಸ್ಥೆಗೆ ಇನ್ನಷ್ಟು ಸಾಲ ನೀಡುವ ಯಾವುದೇ ಪ್ರಯತ್ನಕ್ಕೆ ತಮ್ಮ ವಿರೋಧ ಇದೆ ಎಂದೂ ಸಂಘವು ಸ್ಪಷ್ಟಪಡಿಸಿದೆ.

ಸ್ಥಾಪಕ ನರೇಶ್ ಗೋಯಲ್ ಅವರು ಈಗಲೂ ಸಂಸ್ಥೆಯಲ್ಲಿ ಶೇ51ರಷ್ಟು ಪಾಲು ಬಂಡವಾಳ ಹೊಂದಿದ್ದಾರೆ. ಸಂಸ್ಥೆಯನ್ನು ಪುನರಾರರಂಭ ಮಾಡುವುದು ಅಥವಾ ಬೇರೊಬ್ಬರಿಗೆ ಮಾರಾಟ ಮಾಡುವುದು ಅವರ ತಲೆನೋವಿನ ವಿಷಯವಾಗಿದೆ. ಇಡೀ ಬಿಕ್ಕಟ್ಟಿನ ಬಗ್ಗೆ ಗೋಯಲ್‌ ಅವರೊಬ್ಬರೇ ಉತ್ತರ ನೀಡಬಲ್ಲವರಾಗಿದ್ದಾರೆ ಎಂದೂ ಸಂಘ ಅಭಿಪ್ರಾಯಪಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು