ಮಂಗಳವಾರ, ಆಗಸ್ಟ್ 3, 2021
21 °C

ಜೆಟ್‌ ಏರ್‌ವೇಸ್‌ ನಷ್ಟ ₹5,536 ಕೋಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜೆಟ್‌ ಏರ್‌ವೇಸ್‌ ವಿಮಾನಯಾನ ಕಂಪನಿಯ ನಷ್ಟ 2018–19ರಲ್ಲಿ ₹ 5,536 ಕೋಟಿಗೆ ತಲುಪಿದೆ. ವೆಚ್ಚದಲ್ಲಿ ಏರಿಕೆ ಆಗಿರುವುದರಿಂದ ನಷ್ಟದ ಪ್ರಮಾಣ ಹೆಚ್ಚಾಗಿದೆ ಎಂದು ಕಂಪನಿ ತಿಳಿಸಿದೆ. 2017–18ರಲ್ಲಿ ಕಂಪನಿಯ ನಷ್ಟ ₹ 766 ಕೋಟಿ ಇತ್ತು.

ಒಟ್ಟಾರೆ ವರಮಾನ ₹ 23,958 ಕೋಟಿಗಳಿಂದ ₹ 23,314 ಕೋಟಿಗಳಿಗೆ ಇಳಿಕೆಯಾಗಿದೆ. ಇಂಧನ ದರ ಗರಿಷ್ಠ ಮಟ್ಟದಲ್ಲಿ ಇದ್ದಿದ್ದರಿಂದ ಒಟ್ಟಾರೆ ವೆಚ್ಚವು ₹ 28,142 ಕೋಟಿ ಆಗಿದೆ ಎಂದು ಕಂಪನಿ ತಿಳಿಸಿದೆ. ಆರ್ಥಿಕವಾಗಿ ನಷ್ಟದಲ್ಲಿರುವ ಕಂಪನಿಯು 2019ರ ಏಪ್ರಿಲ್‌ 18ರಂದು ಕಾರ್ಯಾಚರಣೆ ಸ್ಥಗಿತಗೊಳಿಸಿದ್ದು, ದಿವಾಳಿ ಪ್ರಕ್ರಿಯೆಗೆ ಒಳಗಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು