ಬುಧವಾರ, ಜೂನ್ 29, 2022
27 °C

ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ದರ ₹25 ಕಡಿತ: ಜಾರ್ಖಂಡ್ ಸರ್ಕಾರ ಘೋಷಣೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ರಾಂಚಿ: ಸಹಾಯಧನ ನೀಡುವ ಮೂಲಕ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್‌ಗೆ ₹25ರಷ್ಟು ಕಡಿತ ಮಾಡಲು ನಿರ್ಧರಿಸಲಾಗಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಘೋಷಿಸಿದ್ದಾರೆ.

ದರ ಕಡಿತವು 2022ರ ಜನವರಿ 26ರಿಂದ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಚಾರವಾಗಿ ಜಾರ್ಖಂಡ್ ಮುಖ್ಯಮಂತ್ರಿಗಳ ಕಾರ್ಯಾಲಯ ಟ್ವೀಟ್ ಮಾಡಿದ್ದು, ‘ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು ಬಡವರು, ಮಧ್ಯಮ ವರ್ಗದ ಜನರು ಹೆಚ್ಚು ತೊಂದರೆಗೀಡಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರವು ದ್ವಿಚಕ್ರ ವಾಹನಗಳಿಗೆ ಪ್ರತಿ ಲೀಟರ್ ಪೆಟ್ರೋಲ್‌ ದರದಲ್ಲಿ ₹25ರಷ್ಟು ಸಹಾಯಧನ ನೀಡಲು ನಿರ್ಧರಿಸಿದೆ. 2022ರ ಜನವರಿ 26ರಿಂದ ಇದರ ಪ್ರಯೋಜನ ದೊರೆಯಲಿದೆ’ ಎಂದು ಉಲ್ಲೇಖಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು