ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಯೊ ಫೈನಾನ್ಶಿಯಲ್‌ ಲಾಭ ಹೆಚ್ಚಳ

Published 16 ಅಕ್ಟೋಬರ್ 2023, 16:06 IST
Last Updated 16 ಅಕ್ಟೋಬರ್ 2023, 16:06 IST
ಅಕ್ಷರ ಗಾತ್ರ

ನವದೆಹಲಿ : ಜಿಯೊ ಫೈನಾನ್ಶಿಯಲ್‌ ಸರ್ವಿಸಸ್‌ ಲಿಮಿಟೆಡ್‌, ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹668 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದಲ್ಲಿ ಇದ್ದ ₹331 ಕೋಟಿ ಲಾಭಕ್ಕೆ ಹೋಲಿಸಿದರೆ ಈ ಬಾರಿ ಲಾಭದಲ್ಲಿ ಶೇ 30ರಷ್ಟು ಏರಿಕೆ ಕಂಡುಬಂದಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನಿಂದ ಪ್ರತ್ಯೇಕಗೊಂಡ ಬಳಿಕ ಕಂಪನಿಯ ಮೊದಲ ಫಲಿತಾಂಶ ಇದಾಗಿದೆ. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ವರಮಾನವು ಶೇ 47ರಷ್ಟು ಏರಿಕೆ ಕಂಡು ₹608 ಕೋಟಿಗೆ ತಲುಪಿದೆ. ಹಿಂದಿನ ಇದೇ ಅವಧಿಯಲ್ಲಿ ವರಮಾನ ₹414 ಕೋಟಿಯಷ್ಟು ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT