ಮುಂಬೈ: ರಿಲಯನ್ಸ್ ಸಮೂಹಕ್ಕೆ ಸೇರಿರುವ ಜಿಯೊ ಫೈನಾನ್ಶಿಯಲ್ ಸರ್ವಿಸಸ್ (ಜೆಎಫ್ಎಸ್) ಕಂಪನಿಯು ಪ್ರಸಕ್ತ ವರ್ಷದಲ್ಲಿ ಜೀವ ವಿಮೆ ಮತ್ತು ಸಾಮಾನ್ಯ ವಿಮಾ ವ್ಯವಹಾರವನ್ನು ಆರಂಭಿಸುವ ನಿರೀಕ್ಷೆ ಇದೆ ಎಂದು ಕಂಪನಿಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2026ರಲ್ಲಿ ವಿಮೆ ವ್ಯವಹಾರ ಪ್ರಾರಂಭಿಸುವ ನಿರೀಕ್ಷೆ ಇದೆ. ಇದಕ್ಕಾಗಿ ನಿಯಂತ್ರಕ ಘಟಕಗಳ ಅನುಮೋದನೆ ಬೇಕಿದೆ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕ ಹಿತೇಷ್ ಸೇಥಿಯಾ ಹೇಳಿದ್ದಾರೆ.

ಕಂಪನಿಯು ಸಾಮಾನ್ಯ ಹಾಗೂ ಜೀವ ವಿಮೆ ವ್ಯವಹಾರಕ್ಕಾಗಿ ಫ್ರಾನ್ಸ್ನ ಕಂಪನಿಯೊಂದಿಗೆ ಪಾಲುದಾರಿಕೆ ಮಾಡಿಕೊಳ್ಳಲಿದೆ. ಕಂಪನಿಯು ವಿಮಾ ಕ್ಷೇತ್ರಕ್ಕೆ ಅಗತ್ಯವಾದ ತಂಡಗಳನ್ನು ನಿರ್ಮಿಸುವತ್ತ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಕಂಪನಿಯು ಈಗಾಗಲೇ ವೈಯಕ್ತಿಕ ಸಾಲಗಳು ಮತ್ತು ಕ್ರೆಡಿಟ್ ಕಾರ್ಡ್ಗಳನ್ನು ನೀಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.