ಮಂಗಳವಾರ, ಮಾರ್ಚ್ 28, 2023
31 °C

ಬೆಂಗಳೂರಿನಲ್ಲಿ ಜಿಯೊ 5ಜಿ ಶುರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಿಲಯನ್ಸ್ ಜಿಯೊ ಕಂಪನಿಯು ಬೆಂಗಳೂರು ಮತ್ತು ಹೈದರಾಬಾದ್‌ನಲ್ಲಿ 5ಜಿ ಸೇವೆಗಳನ್ನು ಆರಂಭಿಸಿರುವುದಾಗಿ ಗುರುವಾರ ತಿಳಿಸಿದೆ.

ಜಿಯೊ ಕಂಪನಿಯು 5ಜಿ ಸೇವೆಗಳನ್ನು ಹಂತ ಹಂತವಾಗಿ ವಿಸ್ತರಿಸುತ್ತಿದೆ. ದೇಶದ ಆರು ನಗರಗಳಲ್ಲಿ 5ಜಿ ಸೇವೆಗಳು ಈಗಾಗಲೇ ಲಭ್ಯವಿದ್ದವು. ಈಗ ಅದು ಬೆಂಗಳೂರು ಹಾಗೂ ಹೈದರಾಬಾದ್‌ಗೂ ವಿಸ್ತರಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ಜಿಯೊ 5ಜಿ ಗ್ರಾಹಕರಿಗೆ 500 ಎಂಬಿಪಿಎಸ್‌ನಿಂದ 1 ಜಿಬಿಪಿಎಸ್‌ವರೆಗಿನ ವೇಗದ ಇಂಟರ್ನೆಟ್ ಸೇವೆ ಲಭ್ಯವಾಗುತ್ತಿದೆ. ಗ್ರಾಹಕರು ದೊಡ್ಡ ಪ್ರಮಾಣದಲ್ಲಿ ಡೇಟಾ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅದು ಹೇಳಿದೆ.

ಬೆಂಗಳೂರು ಹಾಗೂ ಹೈದರಾಬಾದ್‌ನ ಜಿಯೊ ಗ್ರಾಹಕರು 5ಜಿ ಸೇವೆ ಪಡೆಯಲು ಹೆಚ್ಚುವರಿ ಶುಲ್ಕ ಪಾವತಿಸಬೇಕಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು