ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಂಟಿ ಪಾಲುದಾರಿಕೆಯಲ್ಲಿ ಜಿಯೊದಿಂದ ಉಪಗ್ರಹ ಆಧಾರಿತ ಇಂಟರ್ನೆಟ್ ಸಂಪರ್ಕ

Last Updated 14 ಫೆಬ್ರುವರಿ 2022, 16:45 IST
ಅಕ್ಷರ ಗಾತ್ರ

ಬೆಂಗಳೂರು: ಜಿಯೊ ಪ್ಲಾಟ್‌ಫಾರ್ಮ್ಸ್‌ ಲಿಮಿಟೆಡ್‌ ಮತ್ತು ಲಕ್ಸಂಬರ್ಗ್‌ ಮೂಲದ ಎಸ್‌ಇಎಸ್‌ ಕಂಪನಿ ಜಂಟಿ ಪಾಲುದಾರಿಕೆಯಲ್ಲಿ ಉಪಗ್ರಹ ತಂತ್ರಜ್ಞಾನವನ್ನು ಬಳಸಿಕೊಂಡು, ಕೈಗೆಟಕುವ ದರದಲ್ಲಿ ಬ್ರಾಡ್‌ಬ್ಯಾಂಡ್ ಸೇವೆಗಳನ್ನು ಒದಗಿಸುವ ‘ಜಿಯೊ ಸ್ಪೇಸ್ ಟೆಕ್ನಾಲಜಿ ಲಿಮಿಟೆಡ್’ ಕಂಪನಿಯನ್ನು ಆರಂಭಿಸಿವೆ.

ಈ ಕಂಪನಿಯಲ್ಲಿ ಜಿಯೊ ಶೇ 51ರಷ್ಟು ಷೇರುಗಳನ್ನು, ಎಸ್‌ಇಎಸ್‌ ಶೇ 49ರಷ್ಟು ಷೇರುಗಳನ್ನು ಹೊಂದಿರಲಿದೆ. ಗರಿಷ್ಠ 100 ಜಿಬಿಪಿಎಸ್‌ ವೇಗದ ಇಂಟರ್ನೆಟ್ ಸಂಪರ್ಕವನ್ನು ಒದಗಿಸುವ ಸಾಮರ್ಥ್ಯ ಇದಕ್ಕೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

‘ಉಪಗ್ರಹ ಆಧಾರಿತ ಸಂವಹನ ಸೇವೆಗಳಿಂದಾಗಿ ಜಿಯೊಗೆ ದೇಶದ ಸಣ್ಣ ಹಳ್ಳಿಗಳಿಗೂ ಬ್ರಾಡ್‌ಬ್ಯಾಂಡ್ ಸೇವೆ ಒದಗಿಸಲು ಸಾಧ್ಯವಾಗುತ್ತದೆ’ ಎಂದು ಜಿಯೊ ನಿರ್ದೇಶಕ ಆಕಾಶ್ ಅಂಬಾನಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT