ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿ ಮೇ ತಿಂಗಳಿನಲ್ಲಿ ನಡೆಯಲಿರುವ 2020ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಹೂಡಿಕೆದಾರರನ್ನು ಆಕರ್ಷಿಸಲು ದೇಶದಾದ್ಯಂತ ರೋಡ್ ಷೋ ನಡೆಸಲಾಗುತ್ತಿದೆ. ಮೊದಲ ರೋಡ್ ಷೋಬೆಂಗಳೂರಿನಲ್ಲಿ ಸೋಮವಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ₹ 670 ಕೋಟಿ ಮೌಲ್ಯದ ಹೂಡಿಕೆ ಒಪ್ಪಂದ ನಡೆದಿದೆ. ತಂತ್ರಜ್ಞಾನ ನಾವಿನ್ಯತಾ ಕೇಂದ್ರದಲ್ಲಿ ₹ 170ಕೋಟಿ ಹೂಡಿಕೆ ಮಾಡುವ ಪ್ರಸ್ತಾವವೂ ಬಂದಿದೆ.
ಟೊಯೋಟ ಕಿರ್ಲೊಸ್ಕರ್, ವಿಪ್ರೊ, ಫ್ಲಿಪ್‌ಕಾರ್ಟ್, ಒರಾಕಲ್ ಇಂಡಿಯಾ ಒಳಗೊಂಡು ಪ್ರಮುಖ ಕಂಪನಿಗಳು ಭಾಗವಹಿಸಿದ್ದವು.
ಕೇಂದ್ರಾಡಳಿತ ಪ್ರದೇಶವಾದ ಬಳಿಕ ನಡೆಯುತ್ತಿರುವ ಮೊದಲ ಸಮಾವೇಶ ಇದಾಗಿದೆ.ಜಮ್ಮು ಕಾಶ್ಮೀರದಲ್ಲಿ ಐ.ಟಿ ಕ್ಷೇತ್ರವನ್ನು ಮೇಲ್ದರ್ಜೆಗೆ ಏರಿಸುವ ಮೂಲಕ 5 ವರ್ಷಗಳಲ್ಲಿ ಪ್ರತಿ ವರ್ಷವೂ ₹ 500 ಕೋಟಿ ಹೂಡಿಕೆ ಆಕರ್ಷಿಸಲು ಸರ್ಕಾರ ಉದ್ದೇಶಿಸಿದೆ. 10 ವರ್ಷಗಳಲ್ಲಿ 5 ಐ.ಟಿ ಪಾರ್ಕ್‌ಗಳನ್ನು ಸ್ಥಾಪಿಸುವ ಮತ್ತು 50 ಸಾವಿರ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಪ್ರಸ್ತಾವವನ್ನೂ ಹೊಂದಿದೆ.
‘ಹೂಡಿಕೆ ಉತ್ತೇಜಿಸುವ ಮತ್ತು ಜಮ್ಮು ಕಾಶ್ಮೀರವನ್ನು ಕೈಗಾರಿಕಾ ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ 48ಕ್ಕೂ ಅಧಿಕ ಹೂಡಿಕೆ ಯೋಜನೆಗಳು ಹಾಗೂ 14 ಉದ್ಯಮ ವಲಯಗಳನ್ನು ಗುರುತಿಸಲಾಗಿದೆ’ ಎಂದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಅವರ ಸಲಹೆಗಾರ ಕೇವಲ್ ಕುಮಾರ್ ಶರ್ಮಾ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.