ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಹಾಗೂ ಖಾಸಗಿ ಕಂಪನಿಗಳು ಜೊತೆಯಾಗಿ ಸೌದಿ ಅರೇಬಿಯಾ ಮತ್ತು ಇತರ ದೇಶಗಳಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರದೀಪ್ ಸಿಂಗ್ ಪುರಿ ಹೇಳಿದ್ದಾರೆ.
ಎರಡೂ ವಲಯದ ಕಂಪನಿಗಳು ಜೊತೆಯಾಗಿ ತೈಲ ಆಮದು ಮಾಡಿಕೊಂಡಾಗ, ಬೆಲೆ ವಿಚಾರದಲ್ಲಿ ಚೌಕಾಸಿ ಮಾಡಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಲು ಈ ವಿಚಾರವಾಗಿ ಸಭೆ ಕರೆಯಲಾಗಿತ್ತು.
ಖಾಸಗಿ ವಲಯದ ತೈಲ ಸಂಸ್ಕರಣಾ ಕಂಪನಿಗಳು ಉತ್ಸಾಹದಿಂದ ಪ್ರತಿಕ್ರಿಯೆ ನೀಡಿವೆ ಎಂದು ಪುರಿ ತಿಳಿಸಿದ್ದಾರೆ. ಈಗಿರುವ ವ್ಯವಸ್ಥೆಯ ಅಡಿಯಲ್ಲಿ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಕಂಪನಿಗಳು ಪ್ರತ್ಯೇಕವಾಗಿ ತೈಲ ಆಮದು ಮಾಡಿಕೊಳ್ಳುತ್ತಿವೆ.
ಖಾಸಗಿ ಕಂಪನಿಗಳು ಕೂಡ ಪ್ರತ್ಯೇಕವಾಗಿ ಆಮದು ಮಾಡಿಕೊಳ್ಳುತ್ತಿವೆ. ಎಲ್ಲ ಕಂಪನಿಗಳೂ ಒಟ್ಟಾಗಿ ತೈಲ ಆಮದು ಮಾಡಿಕೊಳ್ಳುವಂತೆ ಆದಲ್ಲಿ, ಬೆಲೆ ವಿಚಾರದಲ್ಲಿ ಚೌಕಾಸಿ ಮಾಡಲು ಸಾಧ್ಯವಾಗುತ್ತದೆ ಎಂಬುದು ಕೇಂದ್ರದ ಲೆಕ್ಕಾಚಾರ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.