ಚಿಕ್ಕೋಡಿ: ‘ಗ್ರಾಮೀಣ ಪ್ರದೇಶದಲ್ಲಿ ಆರಂಭಗೊಂಡ ಸಂಸ್ಥೆಯು ಇಂದು ಅಂತರರಾಜ್ಯ ಮಟ್ಟದಲ್ಲಿ ಪ್ರಗತಿ ಸಾಧಿಸುತ್ತಿದೆ. ಪ್ರಸಕ್ತ ವರ್ಷ 55 ನೂತನ ಶಾಖೆ ಆರಂಭಿಸುವ ಗುರಿ ಹೊಂದಲಾಗಿದೆ’ ಎಂದು ಜೊಲ್ಲೆ ಗ್ರೂಪ್ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ತಾಲ್ಲೂಕಿನ ಯಕ್ಸಂಬಾ-ನಣದಿಯ ಸಿಬಿಎಸ್ಇ ಶಾಲೆ ಮೈದಾನದಲ್ಲಿ ಭಾನುವಾರ ನಡೆದ ಜೊಲ್ಲೆ ಗ್ರೂಪ್ನ ವಿವಿಧ ಸಂಸ್ಥೆಗಳ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ದೇಶದಲ್ಲಿ ಸಹಕಾರಿ ಸಂಸ್ಥೆಗಳು ಬೆಳವಣಿಗೆ ಕಾಣುತ್ತಿವೆ. ಪ್ರಧಾನಿ ಮೋದಿ ರೈತ ಸಹಕಾರ ಸಂಘ ಆರಂಭಿಸಿ, ರೈತರಿಗೆ ಅನುಕೂಲ ಕಲ್ಪಿಸಿದ್ದಾರೆ. ಕಳೆದ 36 ವರ್ಷಗಳಿಂದ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಬೀರೇಶ್ವರ ಸಹಕಾರಿ ಶಾಖೆ ಆರಂಭಿಸಿ, ಸಹಕಾರಿ ರಂಗದಲ್ಲಿ ಹೊಸ ಅಧ್ಯಾಯ ಬರೆಯಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ದೊರೆಯುವ ಎಲ್ಲ ಸೌಲಭ್ಯಗಳು ಸಹಕಾರಿ ಸಂಸ್ಥೆಯಲ್ಲಿ ದೊರೆಯುತ್ತಿವೆ. ಇದರಿಂದಾಗಿ ನಮ್ಮ ಸಂಸ್ಥೆಯು ಗ್ರಾಹಕರ ನೆಚ್ಚಿನ ಸಹಕಾರಿ ಸಂಸ್ಥೆಯಾಗಿ ಹೊರಹೊಮ್ಮಿದೆ’ ಎಂದರು.

‘ನಮ್ಮ ಸಂಸ್ಥೆಯು ಪ್ರಸಕ್ತ ವರ್ಷ 4.45 ಲಕ್ಷ ಸದಸ್ಯರನ್ನು ಹೊಂದಿದೆ. ₹5 ಸಾವಿರ ಕೋಟಿಗೂ ಅಧಿಕ ಠೇವಣಿ ಸಂಗ್ರಹಿಸಿದ್ದು, ₹3,838 ಕೋಟಿ ಸಾಲ ಸೌಲಭ್ಯ ಕಲ್ಪಿಸಲಾಗಿದೆ. ₹51.04 ಕೋಟಿ ನಿವ್ವಳ ಲಾಭ ಗಳಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾದಲ್ಲಿ 233 ಶಾಖೆಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಸಂಸ್ಥೆಯು ಇಷ್ಟೊಂದು ಬೆಳವಣಿಗೆ ಸಾಧಿಸಲು ಗ್ರಾಹಕರ ವಿಶ್ವಾಸ, ಆಡಳಿತ ಮಂಡಳಿ ಪ್ರೋತ್ಸಾಹ ಮತ್ತು ಸಿಬ್ಬಂದಿ ನಿರಂತರ ಪರಿಶ್ರಮವೇ ಕಾರಣ’ ಎಂದು ಹೇಳಿದರು.

‘ಹುಲಜಂತಿಯಲ್ಲಿ ₹1 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಿಸಲಾಗುತ್ತದೆ. ಜೊಲ್ಲೆ ಮನೆತನ ಸಮಾಜದ ಪರವಾಗಿ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದರು.

ಶಾಸಕಿ ಶಶಿಕಲಾ ಜೊಲ್ಲೆ, ‘ಜೊಲ್ಲೆ ಮನೆತನವು ಸಾಮಾಜಿಕವಾಗಿ ಕೆಲಸ ಮಾಡುತ್ತ ಬಂದಿದೆ. ಬೀರೇಶ್ವರ ಸಂಸ್ಥೆಯ ಮೂಲಕ ಸಮಾಜಮುಖಿ ಕೆಲಸ ಮಾಡಲು ಪ್ರೇರಣೆ ಸಿಕ್ಕಿದೆ. ಸಿಬ್ಬಂದಿ ಸಹಕಾರ ಹಾಗೂ ಸದಸ್ಯರ ಪ್ರೋತ್ಸಾಹದಿಂದ ಸಂಸ್ಥೆ ಮುನ್ನಡೆಯುತ್ತಿದೆ’ ಎಂದು ಹೇಳಿದರು.

ಬೀರೇಶ್ವರ ಸಹಕಾರಿ ಸಂಸ್ಥೆ ಅಧ್ಯಕ್ಷ ಅಪ್ಪಾಸಾಹೇಬ ಜೊಲ್ಲೆ, ಉಪಾಧ್ಯಕ್ಷ ಆನಂದ ಪಾಟೀಲ, ಜ್ಯೋತಿ ಸಂಸ್ಥೆ ಅಧ್ಯಕ್ಷ ಬಾಬುರಾವ್ ಮಾಳಿ, ಉಪಾಧ್ಯಕ್ಷ ವಿಶ್ವನಾಥ ಪೇಟಕರ, ಯಕ್ಸಂಬಾ ಮಹಿಳಾ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಮಂಗಲ ಜೊಲ್ಲೆ, ಉಪಾಧ್ಯಕ್ಷ ಆರತಿ ಪೋತದಾರ, ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮಣ ಕಬಾಡೆ, ಉಪಾಧ್ಯಕ್ಷ ಸದಾಶಿವ ಕೋಕಣೆ, ಮಹೇಶ ಭಾತೆ, ಈಶ್ವರ ಕತ್ತಿ, ರಾಜೇಂದ್ರ ಪಾಟೀಲ, ಚಂದ್ರಶೇಖರ ಕವಟಗಿ, ಪ್ರಧಾನ ವ್ಯವಸ್ಥಾಪಕ ಬಿ.ಎ.ಗುರವ, ಉಪ ಪ್ರಧಾನ ವ್ಯವಸ್ಥಾಪಕ ಎಂ.ಕೆ.ಮಂಗಾವತೆ, ಆರ್.ಜಿ.ಕುಂಬಾರ, ಎಸ್.ಕೆ.ಮಾನೆ, ಶಿವು ಡಬ್ಬನ್ನವರ, ಶೇಖರ ಪಾಟೀಲ, ಸಂತೋಷ ಪಾಟೀಲ, ಎಂ.ಎಂ.ಪಾಟೀಲ ಇದ್ದರು. ಜೊಲ್ಲೆ ಗ್ರೂಪ್ ಉಪಾಧ್ಯಕ್ಷ ಬಸವಪ್ರಸಾದ ಜೊಲ್ಲೆ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-21-362964149

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.