ಶುಕ್ರವಾರ, ಅಕ್ಟೋಬರ್ 7, 2022
23 °C

ಜಿಜೆಇಪಿಸಿ ದಕ್ಷಿಣ ವಲಯ ಅಧ್ಯಕ್ಷರಾಗಿ ಜೋಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮುತ್ತು ಮತ್ತು ಆಭರಣ ರಫ್ತು ಉತ್ತೇಜನಾ ಮಂಡಳಿಯ (ಜಿಜೆಇಪಿಸಿ) ದಕ್ಷಿಣ ವಲಯದ ಅಧ್ಯಕ್ಷರಾಗಿ ಪ್ರಿನ್ಸ್‌ ಜುವೆಲರಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಧ್ಯಕ್ಷ ಪ್ರಿನ್ಸ್‌ಸನ್‌ ಜೋಸ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅವರು ಈ ಸ್ಥಾನಕ್ಕೆ ಆಯ್ಕೆ ಆಗುತ್ತಿರುವುದು ಐದನೆಯ ಬಾರಿ ಎಂದು ಪ್ರಕಟಣೆ ತಿಳಿಸಿದೆ. ‘ಈ ಸ್ಥಾನಕ್ಕೆ ಆಯ್ಕೆಯಾಗಿರುವುದು ವಿಶೇಷ ಗೌರವ. ಉದ್ಯಮಕ್ಕೆ ಪೂರಕವಾದ ನೀತಿ ರೂಪಿಸಲು ನಾನು ಉದ್ಯಮ ಹಾಗೂ ಸರ್ಕಾರದ ಜೊತೆ ನಿಕಟವಾಗಿ ಕೆಲಸ ಮಾಡುವೆ’ ಎಂದು ಜೋಸ್ ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು