ಮಂಗಳವಾರ, ಮಾರ್ಚ್ 31, 2020
19 °C

ಕರ್ಣಾಟಕ ಬ್ಯಾಂಕ್‌ನದು ಸುರಕ್ಷಿತ ಮಾನದಂಡ: ಎಂ.ಎಸ್‌. ಮಹಾಬಲೇಶ್ವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಬಂಡವಾಳ ಪರ್ಯಾಪ್ತತಾ ಅನುಪಾತವೇ ಬ್ಯಾಂಕ್‌ಗಳ ಸುರಕ್ಷತೆಯ ಮಾನದಂಡ ಎಂದು ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ಸ್ಪಷ್ಟಪಡಿಸಿದ್ದಾರೆ.

‘ವಿದೇಶಗಳಲ್ಲಿ ‘ಬಂಡವಾಳ ಪರ್ಯಾಪ್ತತಾ ಅನುಪಾತ’ಕ್ಕೆ ಬ್ಯಾಂಕಿನ ಮುಂಗಡ, ಹೂಡಿಕೆ ಇತ್ಯಾದಿಗಳ ಸುರಕ್ಷತೆಯ ಆಧಾರದ ಮೇಲೆ ಕನಿಷ್ಠ ಶೇ 8ರ ಮಾನದಂಡವನ್ನು ಪಾಲಿಸುತ್ತಿದ್ದರೆ, ಭಾರತದಲ್ಲಿ ಕನಿಷ್ಠ ಶೇ 9ರ ಅನುಪಾತವನ್ನು ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದೆ. ಆದರೆ ಕರ್ಣಾಟಕ ಬ್ಯಾಂಕ್‌ ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದ ಶೇ 9ರ ಅನುಪಾತಕ್ಕೆ ಇನ್ನೂ ಶೇ 1 ಹೆಚ್ಚಾಗಿಯೇ ಇದೆ’ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ‘ಎಂ- ಕ್ಯಾಪ್’ ಅನುಪಾತ ಅರ್ಥವಿಲ್ಲದ್ದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು