ನವದೆಹಲಿ: ರಿಲಯನ್ಸ್ ಹೋಮ್ ಫೈನಾನ್ಸ್ ಮತ್ತು ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ಕಂಪನಿಗಳು ಒಟ್ಟಾರೆ ₹ 160 ಕೋಟಿ ಮೊತ್ತದ ಸಾಲ ಬಾಕಿ ಉಳಿಸಿಕೊಂಡಿದ್ದು, ಈ ಸಾಲ ಖಾತೆಗಳನ್ನು ‘ವಂಚನೆ’ ಎಂದುಕರ್ಣಾಟಕ ಬ್ಯಾಂಕ್ ಘೋಷಿಸಿದೆ.

‘ಷೇರುಪೇಟೆಯಲ್ಲಿ ನೋಂದಾಯಿತವಾಗಿರುವ ಎರಡೂ ಕಂಪನಿಗಳಿಗೆ ನೀಡಿರುವ ಸಾಲ ಸೌಲಭ್ಯಗಳಲ್ಲಿನ ವಂಚನೆಯ ಬಗ್ಗೆ ಆರ್‌ಬಿಐಗೆ ಮಾಹಿತಿ ನೀಡಲಾಗಿದೆ. ರಿಲಯನ್ಸ್ ಹೋಮ್ ಫೈನಾನ್ಸ್ ₹ 21.94 ಕೋಟಿ ಹಾಗೂ ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ₹ 138.41 ಕೋಟಿ ಮೊತ್ತದ ಸಾಲ ಬಾಕಿ ಉಳಿಸಿಕೊಂಡಿದೆ’ ಎಂದು ಕರ್ಣಾಟಕ ಬ್ಯಾಂಕ್ ಷೇರುಪೇಟೆಗೆ ಮಾಹಿತಿ ನೀಡಿದೆ.

ರಿಲಯನ್ಸ್ ಹೋಮ್ ಫೈನಾನ್ಸ್ ಜತೆ 2015ರಿಂದ ಹಾಗೂ ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ಜೊತೆ 2014ರಿಂದ ವ್ಯವಹಾರ ಹೊಂದಿರುವುದಾಗಿ ಬ್ಯಾಂಕ್ ತಿಳಿಸಿದೆ.

24ಕ್ಕೂ ಹೆಚ್ಚಿನ ಬ್ಯಾಂಕ್‌ಗಳು ಒಟ್ಟಾಗಿ ರಿಲಯನ್ಸ್ ಹೋಮ್ ಫೈನಾನ್ಸ್‌ಗೆ ಸಾಲ ನೀಡಿವೆ. ಇದರಲ್ಲಿ ಕರ್ಣಾಟಕ ಬ್ಯಾಂಕ್‌ನ ಪಾಲು ಶೇಕಡ 0.39ರಷ್ಟಿದೆ. ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್‌ಗೆ 22 ಬ್ಯಾಂಕ್‌ಗಳು ಒಟ್ಟಾಗಿ ಸಾಲ ನೀಡಿದ್ದು ಅದರಲ್ಲಿ ಕರ್ಣಾಟಕ ಬ್ಯಾಂಕ್ ಪಾಲು ಶೇ 1.98ರಷ್ಟಿದೆ ಎಂದು ಅದು ಮಾಹಿತಿ ನೀಡಿದೆ.

ಎರಡೂ ಖಾತೆಗಳನ್ನು ಎನ್‌ಪಿಎ (ವಸೂಲಾಗದ ಸಾಲ) ಎಂದು ವರ್ಗೀಕರಿಸಲಾಗಿದೆ ಎಂದು ಬ್ಯಾಂಕ್ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.