ಮಂಗಳೂರು: ಈ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಕರ್ಣಾಟಕ ಬ್ಯಾಂಕ್ ₹125.61 ಕೋಟಿ ಲಾಭ ಗಳಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ₹119.44 ಕೋಟಿ ಲಾಭ ಗಳಿಸತ್ತು.
ನಗರದ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ದ್ವಿತೀಯ ತ್ರೈಮಾಸಿಕ ಹಾಗೂ ಅರ್ಧ ವಾರ್ಷಿಕದ (30-09-2021) ಹಣಕಾಸು ವರದಿಯನ್ನು ಅನುಮೋದಿಸಲಾಯಿತು.
ಬ್ಯಾಂಕಿನ ನಿವ್ವಳ ಬಡ್ಡಿ ಆದಾಯವು ಶೇ 10.83ರ ದರದಲ್ಲಿ ವೃದ್ಧಿಯಾಗಿದ್ದು, ₹637.10 ಕೋಟಿ ತಲುಪಿದೆ. ಮೊದಲ ತ್ರೈಮಾಸಿಕದ ಅಂತ್ಯಕ್ಕೆ ಇದು ₹574.87 ಕೋಟಿಯಾಗಿತ್ತು. ಬ್ಯಾಂಕಿನ ಅನುತ್ಪಾದಕ ಸ್ವತ್ತುಗಳು ಗಣನೀಯವಾಗಿ ಇಳಿಕೆಯಾಗಿದ್ದು, ಸ್ಥೂಲ ಅನುತ್ಪಾದಕ ಸ್ವತ್ತುಗಳು (ಜಿಎನ್‌ಪಿಎ) ಶೇ 4.50ಕ್ಕೆ ಇಳಿಕೆಯಾಗಿದೆ. ನಿವ್ವಳ ಅನುತ್ಪಾದಕ ಸ್ವತ್ತುಗಳು (ಎನ್‌ಎನ್‌ಪಿಎ) ಶೇ 3ರಿಂದ ಶೇ 2.84 ಕ್ಕೆ ಇಳಿಕೆಯಾಗಿದೆ.
₹76,921.98 ಕೋಟಿ ಠೇವಣಿ ಹಾಗೂ ₹54,467.94 ಕೋಟಿ ಮುಂಗಡ ಸೇರಿ ಬ್ಯಾಂಕಿನ ಒಟ್ಟು ವಹಿವಾಟು ₹1,31,389.92 ಕೋಟಿ ತಲುಪಿದೆ. ಮುಂಗಡ ಮತ್ತು ಠೇವಣಿಗಳ ಅನುಪಾತ ಶೇ 70.81 ರಷ್ಟಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.