ಭಾನುವಾರ, ಸೆಪ್ಟೆಂಬರ್ 26, 2021
27 °C

ಕರ್ಣಾಟಕ ಬ್ಯಾಂಕ್‌ಗೆ ₹ 106 ಕೋಟಿ ಲಾಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕರ್ಣಾಟಕ ಬ್ಯಾಂಕ್ ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದ ಅಂತ್ಯಕ್ಕೆ ₹ 106.08 ಕೋಟಿ ನಿವ್ವಳ ಲಾಭವನ್ನು ಘೋಷಿಸಿದೆ.

ಮಾರ್ಚ್‌ 31ಕ್ಕೆ ಕೊನೆಗೊಂಡ ಈ ಹಿಂದಿನ ತ್ರೈಮಾಸಿಕದ ಅಂತ್ಯಕ್ಕೆ ₹ 31.36 ಕೋಟಿ ಲಾಭ ದಾಖಲಿಸಿತ್ತು. ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಬ್ಯಾಂಕ್ ಶೇ 238.26 ಬೆಳವಣಿಗೆ ಸಾಧಿಸಿದಂತಾಗಿದೆ.

ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ವೆಬೆಕ್ಸ್ ಮೂಲಕ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಮೊದಲ ತ್ರೈಮಾಸಿಕದ ಹಣಕಾಸು ವರದಿಯನ್ನು ಅಂಗೀಕರಿಸಲಾಯಿತು.

ನಿರ್ವಹಣಾ ಲಾಭವು ₹ 414.22 ಕೋಟಿ ತಲುಪಿದ್ದು, ಶೇ 7.96ರ ವೃದ್ಧಿ ದಾಖಲಿಸಿದೆ. ನಿವ್ವಳ ಬಡ್ಡಿ ಆದಾಯವು ₹ 574.79 ಕೋಟಿಯಾಗಿದ್ದು, ಶೇ 25.19ರಷ್ಟು ಪ್ರಗತಿ ಸಾಧಿಸಿದೆ. ಬ್ಯಾಂಕಿನ ಒಟ್ಟು ವ್ಯವಹಾರವು ₹1.28 ಲಕ್ಷ ಕೋಟಿಗೆ ತಲುಪಿದ್ದು, ಠೇವಣಿಗಳ ಮೊತ್ತವು ₹76,214.78 ಕೋಟಿಯಾಗಿದೆ. ₹ 51,791.21 ಕೋಟಿ ಮುಂಗಡ ನೀಡಲಾಗಿದೆ.

‘ಮುಂಬರುವ ತ್ರೈಮಾಸಿಕದಲ್ಲಿ ಬ್ಯಾಂಕಿನ ಮೂಲ ವ್ಯವಹಾರಗಳು ಮತ್ತಷ್ಟು ಗಟ್ಟಿಗೊಳ್ಳಲಿವೆ’ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್‌. ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು