ಶನಿವಾರ, ಜುಲೈ 31, 2021
27 °C

ಕರ್ಣಾಟಕ ಬ್ಯಾಂಕ್‌: ₹ 1.26 ಲಕ್ಷ ಕೋಟಿ ವ್ಯವಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಜೂನ್‌ 30 ಕ್ಕೆ ಕೊನೆಗೊಂಡ ಪ್ರಥಮ ತ್ರೈಮಾಸಿಕದಲ್ಲಿ ಕರ್ಣಾಟಕ ಬ್ಯಾಂಕಿನ ಒಟ್ಟು ವ್ಯವಹಾರವು ₹ 1.26 ಲಕ್ಷ ಕೋಟಿಗೆ ತಲುಪಿದೆ. ವಾರ್ಷಿಕ ಶೇಕಡ 3.89ರಷ್ಟು ಬೆಳವಣಿಗೆ ಸಾಧಿಸಿದೆ.

ಬ್ಯಾಂಕಿನ ಠೇವಣಿಗಳ ಮೊತ್ತವು ₹ 68,520.72 ಕೋಟಿಯಿಂದ ₹ 71,853.98 ಕೋಟಿಗೆ ಏರಿದ್ದು, ಮುಂಗಡಗಳು ₹ 52,818.80 ಕೋಟಿಯಿಂದ ₹ 54,209.50 ಕೋಟಿಗೆ ತಲುಪಿದೆ.

ಕರ್ಣಾಟಕ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದ ಅಂತ್ಯಕ್ಕೆ ಶೇ 11.95ರಷ್ಟು ವಹಿವಾಟು ಪ್ರಗತಿ ಸಾಧಿಸಿದ್ದು, ಸಾರ್ವಕಾಲಿಕ ದಾಖಲೆಯ ₹ 196.38 ಕೋಟಿ ನಿವ್ವಳ ಲಾಭ ಘೋಷಿಸಿದೆ.

ಬ್ಯಾಂಕ್ ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹ 175.42 ಕೋಟಿ ಲಾಭ ದಾಖಲಿಸಿತ್ತು. ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ವೆಬೆಕ್ಸ್ ಮೂಲಕ ಶುಕ್ರವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಮೊದಲ ತ್ರೈಮಾಸಿಕದ ಹಣಕಾಸು ವರದಿ ಅಂಗೀಕರಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು