7
ಸಿಇಒ ಮಹಾಬಲೇಶ್ವರ ಎಂ.ಎಸ್‌. ಮಾಹಿತಿ

ಕರ್ಣಾಟಕ ಬ್ಯಾಂಕ್‌ ₹9 ಸಾವಿರ ಕೋಟಿ ಕೃಷಿ ಸಾಲ ಗುರಿ

Published:
Updated:

ಮಂಗಳೂರು: ‘ಈ ಆರ್ಥಿಕ ವರ್ಷದಲ್ಲಿ ಕರ್ಣಾಟಕ ಬ್ಯಾಂಕ್‌, ₹ 9 ಸಾವಿರ ಕೋಟಿಗಳಷ್ಟು ಕೃಷಿ ಸಾಲ ನೀಡುವ ಗುರಿ ಹೊಂದಿದೆ’ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್‌. ಹೇಳಿದರು.

ನಗರದ ಕರ್ಣಾಟಕ ಬ್ಯಾಂಕ್‌ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಕೃಷಿ ವಹಿವಾಟು ಸಮಾವೇಶದಲ್ಲಿ ಅವರು ಮಾತನಾಡಿದರು.

‘ಕೇಂದ್ರ ಸರ್ಕಾರ 2022 ರ ಹೊತ್ತಿಗೆ ಕೃಷಿಕರ ಆದಾಯವನ್ನು ದ್ವಿಗುಣಗೊಳಿಸಲು ಯೋಜನೆ ರೂಪಿಸಿದ್ದು, ಕೃಷಿ ಕ್ಷೇತ್ರದಲ್ಲಿ ಹೂಡಿಕೆಗೆ ಸಾಕಷ್ಟು ಅವಕಾಶಗಳಿವೆ. ಈ ಬಾರಿ ಒಳ್ಳೆಯ ಮುಂಗಾರು ಮಳೆ ಸುರಿದಿದ್ದು, ಈ ಎಲ್ಲ ಅಂಶಗಳನ್ನು ಪರಿಗಣಿಸಿ ಕರ್ಣಾಟಕ ಬ್ಯಾಂಕ್‌ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲು ಬಯಸಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !