Karnataka Budget 2021: ಹೊಸ ತೆರಿಗೆ ಇಲ್ಲ, ಪೆಟ್ರೋಲ್ ತೆರಿಗೆ ಕಡಿತವೂ ಇಲ್ಲ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದ ಸಂಕಷ್ಟಕ್ಕೀಡಾಗಿರುವ ಜನತೆಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈ ವರ್ಷ ಯಾವುದೇ ಹೊಸ ತೆರಿಗೆ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಬಜೆಟ್ ಮಂಡನೆ ವೇಳೆ ಈ ವಿಚಾರ ಬಹಿರಂಗಪಡಿಸಿರುವ ಅವರು, ‘ಕೋವಿಡ್‌ನಿಂದಾಗಿ ಜನ ಈಗಾಗಲೇ ಸಂಕಷ್ಟಕ್ಕೀಡಾಗಿದ್ದಾರೆ. ಅವರಿಗೆ ಮತ್ತಷ್ಟು ತೆರಿಗೆ ಹೊರೆ ವಿಧಿಸುವುದಿಲ್ಲ ಎಂದು ತಿಳಿಸಿದರು.
Live Updates| Karnataka Budget 2021: ಬಜೆಟ್ ಮಂಡನೆ ಆರಂಭಿಸಿದ ಯಡಿಯೂರಪ್ಪ, ಕಾಂಗ್ರೆಸ್ ಪ್ರತಿಭಟನೆ
ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸುತ್ತಿರುವ ಮಾರಾಟ ತೆರಿಗೆಯು ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲೇ ಕಡಿಮೆ ಇದೆ. ಇದನ್ನು ಹೊರತುಪಡಿಸಿ 2021–22ನೇ ಸಾಲಿನಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ಯಾವುದೇ ತೆರಿಗೆ ವಿಧಿಸಲಾಗಿಲ್ಲ. ಹೀಗಾಗಿ ಪೆಟ್ರೋಲ್-ಡೀಸೆಲ್ ಮೇಲಿನ ಮಾರಾಟ ತೆರಿಗೆ ಕಡಿತ ಮಾಡುವುದಿಲ್ಲ ಎಂದು ಅವರು ತಿಳಿಸಿದರು.
ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯು ಜನರ ಮೇಲೆ ಇನ್ನಷ್ಟು ಹೊರೆಯಾಗಬಾರದು ಎಂದು ತೆರಿಗೆ ಹೆಚ್ಚಿಸದಿರಲು ನಿರ್ಧರಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.