ಕರ್ನಾಟಕ ಬಜೆಟ್ 2022| ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ‘ನೀಟ್’ ತರಬೇತಿ

ಬೆಂಗಳೂರು: ನೀಟ್ ಪರೀಕ್ಷೆ ರದ್ದಾಗಬೇಕು ಎಂಬ ಕೂಗು ಪ್ರಬಲವಾಗಿರುವ ನಡುವೆಯೇ ನೀಟ್ ತರಬೇತಿಗಾಗಿ ರಾಜ್ಯದ ಪ್ರತಿ ತಾಲೂಕುಗಳಲ್ಲೂ ತರಬೇತಿ ನೀಟ್ ಪರೀಕ್ಷೆಗೆ ತರಬೇತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಮೊದಲ ಬಜೆಟ್ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಟ್ವಿಟರ್ನಲ್ಲಿ ‘ನೀಟ್’ ರದ್ದು ಅಭಿಯಾನ: ಹಿಂದಿನಂತೆ ಸಿಇಟಿ ವ್ಯವಸ್ಥೆಗೆ ಆಗ್ರಹ
ಬಡಮಕ್ಕಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲು ಸರ್ಕಾರದ ವತಿಯಿಂದ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ ನೀಡಲಾಗುವುದು. ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಸರ್ಕಾರಿ ಕೋಟಾದಲ್ಲಿ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕುಗಳಿಂದ ಶೈಕ್ಷಣಿಕ ಸಾಲ ಒದಗಿಸಲು ರಾಜ್ಯ ಸರ್ಕಾರವು ನೆರವಾಗಲಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳನ್ನು ಎ, ಬಿ, ಸಿ ಮತ್ತು ಡಿ ಎಂದು ವರ್ಗೀಕರಿಸಿ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಕ್ರಮವಹಿಸಲಾಗುವುದು’ ಎಂದು ಬೊಮ್ಮಾಯಿ ತಮ್ಮ ಬಜೆಟ್ನಲ್ಲಿ ತಿಳಿಸಿದ್ದಾರೆ.
ಬಡ ಪ್ರತಿಭಾವಂತೆ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಲು ಸಾಧ್ಯವಾಗದೇ ಇರಲು ‘ನೀಟ್ ಪರೀಕ್ಷೆ’ಯೇ ಕಾರಣ ಎಂಬ ಕೂಗು ಪ್ರಬಲವಾಗಿರುವ ನಡುವೆಯೇ ಮುಖ್ಯಮಂತ್ರಿ ಈ ಕಾರ್ಯಕ್ರಮ ಘೋಷಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.