ಬೆಂಗಳೂರು: ಜಾಗತಿಕವಾಗಿ ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನ, ಶುದ್ಧ ಇಂಧನ ಮತ್ತು ನವೋದ್ಯಮ ಕ್ಷೇತ್ರಗಳಲ್ಲಿ ಕರ್ನಾಟಕದ ಜತೆಗಿನ ವಾಣಿಜ್ಯ ಬಾಂಧವ್ಯ ಇನ್ನಷ್ಟು ಗಟ್ಟಿಗೊಳಿಸಲು ದಕ್ಷಿಣ ಅಮೆರಿಕದ ಚಿಲಿ ಒಲವು ವ್ಯಕ್ತಪಡಿಸಿದೆ.

ಚಿಲಿಯ ವಿದೇಶಾಂಗ ಸಚಿವ ಫ್ರಾನ್ಸಿಸ್ಕೊ ಪೆರೆಜ್ ಮೆಕೆನ್ನಾ ನೇತೃತ್ವದ ಉನ್ನತ ಮಟ್ಟದ ನಿಯೋಗ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರುವಾರ ಭೇಟಿಯಾಗಿ ಚರ್ಚೆ ನಡೆಸಿತು.

ಸಾಂಪ್ರದಾಯಿಕ ವಲಯಗಳನ್ನು ಮೀರಿ ನಾವೀನ್ಯತೆ ನೇತೃತ್ವದಲ್ಲಿನ ಬೆಳವಣಿಗೆ, ಪ್ರತಿಭಾ ವಿನಿಮಯ ಮತ್ತು ಮಾರುಕಟ್ಟೆ ವಿಸ್ತರಣೆ ಕ್ಷೇತ್ರಗಳಲ್ಲಿ ಪಾಲುದಾರಿಕೆ ಹೆಚ್ಚಿಸುವ ಸಾಧ್ಯತೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ನವೋದ್ಯಮ ವಿನಿಮಯ, ಮಾರುಕಟ್ಟೆ ವಿಸ್ತರಣೆ ಕಾರ್ಯಕ್ರಮಗಳು, ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರಗಳು, ನವೋದ್ಯಮ ಪೋಷಣಾ ಕೇಂದ್ರಗಳು ಸೇರಿ ಜಂಟಿ ನಾವೀನ್ಯತೆ ಕಾರಿಡಾರ್ಗಳನ್ನು ನಿರ್ಮಿಸಲು ಚಿಲಿ ಜತೆ ಕೆಲಸ ಮಾಡಲು ಕರ್ನಾಟಕ ಉತ್ಸುಕತೆ ಹೊಂದಿದೆ. ಲ್ಯಾಟಿನ್ ಅಮೆರಿಕಕ್ಕೆ ಪ್ರವೇಶ ದ್ವಾರವಾಗಿರುವ ಚಿಲಿಯು ಕರ್ನಾಟಕದ ನವೋದ್ಯಮಗಳು ಜಾಗತಿಕವಾಗಿ ತಮ್ಮ ವಹಿವಾಟು ವಿಸ್ತರಿಸಲು ಮಹತ್ವದ ಅವಕಾಶ ಒದಗಿಸಲಿದೆ ಎಂದು ಹೇಳಿದರು.

ಫ್ರಾನ್ಸಿಸ್ಕೊ ಪೆರೆಜ್ ಮೆಕೆನ್ನಾ ಮಾತನಾಡಿ, ‘ಜ್ಞಾನ ಮತ್ತು ತಂತ್ರಜ್ಞಾನ ಆಧಾರಿತ ಆರ್ಥಿಕತೆಯತ್ತ ವೇಗವಾಗಿ ಸಾಗುವುದನ್ನು ಚಿಲಿ ಮುಂದುವರಿಸುತ್ತಿದೆ. ತಂತ್ರಜ್ಞಾನ ವಿನಿಮಯ, ಪ್ರತಿಭಾ ಸಹಯೋಗ, ನವೋದ್ಯಮ ಮತ್ತಿತರ ಕ್ಷೇತ್ರಗಳಲ್ಲಿ ಕರ್ನಾಟಕದ ಜತೆ ಪಾಲುದಾರಿಕೆ ಮಾಡಿಕೊಳ್ಳಲು ಚಿಲಿ ಉತ್ಸುಕವಾಗಿದೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-4-876309595

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.