ಭಾನುವಾರ, ಜೂನ್ 20, 2021
29 °C

ದೋಣಿಮಲೈ: ಹರಾಜು ಮುಂದೂಡಿದ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಬಳ್ಳಾರಿ ಜಿಲ್ಲೆಯ ದೋಣಿಮಲೈ ಕಬ್ಬಿಣ ಅದಿರು ಪ್ರದೇಶದ ಹರಾಜು ಪ್ರಕ್ರಿಯೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಮುಂದೂಡಿದೆ.

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮಕ್ಕೆ (ಎನ್‌ಎಂಡಿಸಿ) ನೀಡಿದ್ದ ಗಣಿಗಾರಿಕೆ ಗುತ್ತಿಗೆ ಅವಧಿ ವಿಸ್ತರಣೆಯನ್ನು ರದ್ದುಪಡಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಗಣಿಗಾರಿಕೆ ನ್ಯಾಯಮಂಡಳಿಯು ತಡೆ ನೀಡಿದೆ. ಹೀಗಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ದೋಣಿಮಲೈ ಪ್ರದೇಶದಲ್ಲಿ ಎಂಎಲ್‌ ಸಂಖ್ಯೆ 2396 ಬ್ಲಾಕ್‌ನಲ್ಲಿ ಗಣಿ ಗುತ್ತಿಗೆ ನಡೆಸುವ ಸಂಬಂಧ ಆನ್‌ಲೈನ್‌ ಹರಾಜು ಪ್ರಕ್ರಿಯೆಗೆ ಆಗಸ್ಟ್ 20ರಂದು ಬಿಡ್‌ ಆಹ್ವಾನಿಸಲಾಗಿತ್ತು. ಅದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದೆ ಎಂದು ರಾಜ್ಯ ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು