ಶನಿವಾರ, ಮೇ 21, 2022
25 °C

₹1.25 ಲಕ್ಷ ಕೋಟಿ ಮೈಲಿಗಲ್ಲು ದಾಟಿದ ಕರೂರ್ ವೈಶ್ಯ ಬ್ಯಾಂಕ್ ವಹಿವಾಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾರ್ಚ್‌ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಕರೂರ್ ವೈಶ್ಯ ಬ್ಯಾಂಕ್ ₹ 1.25 ಲಕ್ಷ ಕೋಟಿ ವ್ಯವಹಾರದ ಮೈಲಿಗಲ್ಲು ದಾಟಿದೆ ಎಂದು ಬ್ಯಾಂಕ್ ಹೇಳಿದೆ.

ಬ್ಯಾಂಕಿನ ಒಟ್ಟು ಠೇವಣಿ ₹ 68,676 ಕೋಟಿ, ಒಟ್ಟು ಮುಂಗಡ ₹ 58,086 ಕೋಟಿ ಎಂದು ಬ್ಯಾಂಕ್‌ನ ಪ್ರಕಟಣೆ ತಿಳಿಸಿದೆ.

‘ಬ್ಯಾಂಕ್‌ನ ನೂರಕ್ಕೂ ಹೆಚ್ಚಿನ ವರ್ಷಗಳ ವಹಿವಾಟಿನಲ್ಲಿ ಈ ಮೈಲಿಗಲ್ಲು ಮಹತ್ವದ್ದು’ ಎಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ರಮೇಶ್ ಬಾಬು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು