ಶನಿವಾರ, ಫೆಬ್ರವರಿ 22, 2020
19 °C
ಅರ್ಜಿಗಳನ್ನು ವಜಾ ಮಾಡಿದ ಹೈಕೋರ್ಟ್‌

ಕೇರಳ ಬ್ಯಾಂಕ್‌ ಸ್ಥಾಪನೆ ಹಾದಿ ಸುಗಮ; ವಿರೋಧಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳು ವಜಾ

ಪಿಟಿಐ Updated:

ಅಕ್ಷರ ಗಾತ್ರ : | |

ಸ್ಥಾಪನೆಯಾಗಲಿದೆ ಕೇರಳ ಬ್ಯಾಂಕ್‌

ತಿರುವನಂತಪುರ: ತನ್ನದೇ ಆದ ಬ್ಯಾಂಕ್‌ ಸ್ಥಾಪಿಸುವ ಕೇರಳ ಸರ್ಕಾರದ ಬಹುದಿನಗಳ ಕನಸು ಶೀಘ್ರದಲ್ಲೇ ಈಡೇರಲಿದೆ. ಬ್ಯಾಂಕ್‌ ಸ್ಥಾಪನೆಗೆ ವಿರೋಧಿಸಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನೂ ಹೈಕೋರ್ಟ್‌ ವಜಾ ಮಾಡಿದೆ.

‘ಕೇರಳ ಬ್ಯಾಂಕ್‌ ಸ್ಥಾಪನೆಯಿಂದ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಅವಕಾಶಗಳು ತೆರೆದುಕೊಳ್ಳಲಿವೆ’ ಎಂದು ಸಹಕಾರಿ ಸಚಿವ ಕಡಕಂಪಲ್ಲಿ ಸುರೇಂದ್ರನ್‌ ಅವರು ಹೇಳಿದ್ದಾರೆ.

‘ಇದೊಂದು ಕ್ರಾಂತಿಕಾರಕ ಹೆಜ್ಜೆಯಾಗಿದ್ದು, ರಾಜ್ಯದಲ್ಲಿ ಬ್ಯಾಂಕಿಂಗ್‌ ವಲಯದ ದಿಕ್ಕನ್ನು ಬದಲಿಸುವ ನಂಬಿಕೆ ಇದೆ. ಬ್ಯಾಂಕ್‌ ಸ್ಥಾಪನೆ ಮಾಡುವ ಕುರಿತು ಅಧಿಸೂಚನೆ ಹೊರಡಿಸಲಾಗಿದೆ’ ಎಂದಿದ್ದಾರೆ. 

‘ಕೇರಳ ಬ್ಯಾಂಕ್‌ ಶೀಘ್ರವೇ ಅಸ್ತಿತ್ವಕ್ಕೆ ಬರಲಿದೆ. 13 ಡಿಸಿಬಿಗಳನ್ನು ಕೇರಳ ರಾಜ್ಯ ಸಹಕಾರ ಬ್ಯಾಂಕ್‌ನಲ್ಲಿ ವಿಲೀನಗೊಳಿಸಲು ಸೂಚಿಸಲಾಗಿದೆ’ ಎಂದು ಪಿಣರಾಯಿ ವಿಜಯನ್‌ ಟ್ವೀಟ್‌ ಮಾಡಿದ್ದಾರೆ.

ಜಿಲ್ಲಾ ಸಹಕಾರಿ ಬ್ಯಾಂಕ್‌ಗಳನ್ನು (ಡಿಸಿಬಿ) ಕೇರಳ ರಾಜ್ಯ ಸಹಕಾರ ಬ್ಯಾಂಕ್‌ನಲ್ಲಿ ವಿಲೀನಗೊಳಿಸಿ, ‘ಕೇರಳ ಬ್ಯಾಂಕ್‌’ ಸ್ಥಾಪಿಸುವುದಕ್ಕೆ ಭಾರತೀಯ ರಿಸರ್ವ್‌ ಬ್ಯಾಂಕ್‌ ಒಪ್ಪಿಗೆ ನೀಡಿದೆ.

ಉದ್ದೇಶಿತ ಕೇರಳ ಬ್ಯಾಂಕ್‌ ಅಸ್ತಿತ್ವಕ್ಕೆ ಬಂದರೆ, ಅದು ರಾಜ್ಯದಲ್ಲಿ ಅತಿ ದೊಡ್ಡ ಬ್ಯಾಂಕಿಂಗ್‌ ಜಾಲ ಹೊಂದಿದ ಬ್ಯಾಂಕ್ ಆಗಲಿದೆ.

ಯುಡಿಎಫ್‌ ನಿಯಂತ್ರಣದಲ್ಲಿರುವ ಮಲಪ್ಪುರಂ ಜಿಲ್ಲೆಯಲ್ಲಿರುವ ಡಿಸಿಬಿ ಹೊರತುಪಡಿಸಿ ಉಳಿದೆಲ್ಲಾ ಬ್ಯಾಂಕ್‌ಗಳು ವಿಲೀನಕ್ಕೆ ಒಪ್ಪಿಗೆ ಸೂಚಿಸಿವೆ.

ಇದರಿಂದ ಸಹಕಾರಿ ವಲಯದ ಬಲವರ್ಧನೆ ಆಗಲಿದೆ ಇದು ಹೊಂದಿದೆ ಎನ್ನುವುದು ಸರ್ಕಾರದ ವಾದ. ಆದರೆ, ಸಾಂಪ್ರದಾಯಿಕವಾದ ಸಹಕಾರಿ ವಲಯ ನಾಶವಾಗಲಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು