ಕೊಚ್ಚಿ (ಪಿಟಿಐ): ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ, ಕೇರಳ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ (ಕೆಎಚ್ಆರ್ಎ) ನೇತೃತ್ವದಲ್ಲಿ ಬುಧವಾರ ರಾಜ್ಯದಾದ್ಯಂತ ಹೋಟೆಲ್ಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು.

ರಾಜ್ಯದ ಅನೇಕ ಪ್ರದೇಶಗಳಲ್ಲಿ ದೊಡ್ಡ ಹೋಟೆಲ್ಗಳು, ಸಣ್ಣ ಚಹಾ ಅಂಗಡಿಗಳು ತಮ್ಮ ವ್ಯಾಪಾರವನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದವು.

ಪರಿಸ್ಥಿತಿಯನ್ನು ನಿಯಂತ್ರಿಸಲು ಮಧ್ಯಪ್ರವೇಶಿಸದ ಕೇಂದ್ರ ಸರ್ಕಾರವನ್ನು ಟೀಕಿಸಿರುವ ಕೆಎಚ್ಆರ್ಎ, ‘ತೈಲ ಕಂಪನಿಗಳು ಸತತವಾಗಿ ಇಂಧನ ಬೆಲೆಗಳನ್ನು ನಿರಂತರ ಏರಿಕೆ ಮಾಡಿರುವುದರಿಂದ, ಹೋಟೆಲ್ ಕ್ಷೇತ್ರದಲ್ಲಿ ಇರುವವರು ಬದುಕು ಸಾಗಿಸುವುದು ಕಷ್ಟವಾಗಿದೆ’ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ತೈಲ ಕಂಪನಿಗಳು ಕೇವಲ ಲಾಭದ ಮೇಲೆ ಕಣ್ಣಿಟ್ಟು ಸಾಮಾನ್ಯ ಜನರ ಮತ್ತು ಸಣ್ಣ ವ್ಯಾಪಾರಿಗಳ ಕಷ್ಟವನ್ನು ಮರೆತು ಯಾವುದೇ ಅಂಕೆಯಿಲ್ಲದೆ ಬೆಲೆ ಏರಿಸುತ್ತಿವೆ ಎಂದು ಅದು ಆರೋಪಿಸಿದೆ.

ಪ್ರತಿಭಟನೆಯ ಭಾಗವಾಗಿ ಹೋಟೆಲ್ ಮಾಲೀಕರು ರಾಜ್ಯಾದ್ಯಂತ ತೈಲ ಕಂಪನಿ ಕಚೇರಿಗಳು ಮತ್ತು ಕೇಂದ್ರ ಸರ್ಕಾರಿ ಸಂಸ್ಥೆಗಳ ಮುಂದೆ ಮೆರವಣಿಗೆಗಳನ್ನು ನಡೆಸಿ ತಮ್ಮ ವಿರೋಧ ವ್ಯಕ್ತಪಡಿಸಿದರು. ಜೊತೆಗೆ, ಬಂದ್ನಿಂದಾಗಿ ಸಾರ್ವಜನಿಕರಿಗೆ ಉಂಟಾದ ಅನಾನುಕೂಲತೆಗೆ ಸಂಘಟನೆ ವಿಷಾದ ವ್ಯಕ್ತಪಡಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-51-570537822

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.