ನವದೆಹಲಿ: ದೇಶದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದರಿಂದಾಗಿ ಹೊಸ ಮಾದರಿಯ ಕಾರುಗಳ ಬಿಡುಗಡೆ ವಿಳಂಬವಾಗುವ ಸಾಧ್ಯತೆ ಇದೆ ಎಂದು ಕಿಯಾ ಮೋಟರ್ಸ್ ಕಂಪನಿಯ ಭಾರತದ ಉಪಾಧ್ಯಕ್ಷ ಮನೋಹರ್ ಭಟ್ ತಿಳಿಸಿದ್ದಾರೆ.

‘ಕಂಪನಿಯು ಭಾರತದಲ್ಲಿ ಪ್ರತಿ ಆರು ತಿಂಗಳಿಗೆ ಒಂದು ಹೊಸ ಕಾರು ಬಿಡುಗಡೆ ಮಾಡುವ ಯೋಜನೆ ಹೊಂದಿದೆ.ಲಾಕ್ಡೌನ್ನಿಂದಾಗಿ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ, ಸದ್ಯದ ಮಟ್ಟಿಗೆ ಯೋಜನೆಯಲ್ಲಿ ವ್ಯತ್ಯಾಸವಾದರೂ ದೀರ್ಘಾವಧಿಗೆ ಯಾವುದೇ ಬದಲಾವಣೆ ಇಲ್ಲ. ಮೂರನೇ ಮಾದರಿ ಕಾಂಪ್ಯಾಕ್ಟ್ ಎಸ್ಯುವಿ ಸಾನೆಟ್ ಅನ್ನುಸೆಪ್ಟೆಂಬರ್ನಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ಭಟ್ ತಿಳಿಸಿದ್ದಾರೆ.

ಭಾರತದಲ್ಲಿ ಇದುವರೆಗೆ ₹ 15 ಸಾವಿರ ಕೋಟಿ ಹೂಡಿಕೆ ಮಾಡಲಾಗಿದೆ. ಆಂಧ್ರಪ್ರದೇಶದ ಅನಂತರಪುರದಲ್ಲಿ ಅತ್ಯಾಧುನಿಕ ತಯಾರಿಕಾ ಘಟಕ ಸ್ಥಾಪಿಸಲಾಗಿದೆ. ಇದರ ವಾರ್ಷಿಕ ಸಾಮರ್ಥ್ಯ 3 ಲಕ್ಷ ಇದೆ.

‘ವಾಹನಗಳ ಬುಕಿಂಗ್ ಕೋವಿಡ್ಗೂ ಮೊದಲು ಇದ್ದ ಸ್ಥಿತಿಗೆ ಬಂದಿದೆ. ಆದರೆ, ಸ್ಥಳೀಯವಾಗಿ ಅಲ್ಲಲ್ಲಿ ಲಾಕ್ಡೌನ್ ಜಾರಿಯಾಗುತ್ತಿರುವುದು ಮತ್ತು ಮಂದಗತಿಯ ಆರ್ಥಿಕ ಬೆಳವಣಿಗೆಯಿಂದಾಗಿ ಬೇಡಿಕೆ ಮೇಲೆ ಪರಿಣಾಮ ಉಂಟಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.