ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ ಆಫ್‌ ಬರೋಡಾದಿಂದ ಕಿಸಾನ್‌ ದಿವಸ್‌ ಆಚರಣೆ

Published 1 ಡಿಸೆಂಬರ್ 2023, 23:12 IST
Last Updated 1 ಡಿಸೆಂಬರ್ 2023, 23:12 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಂಕ್ ಆಫ್ ಬರೋಡಾ (ಬಿಒಬಿ) ನವೆಂಬರ್ 16ರಿಂದ 29ರವರೆಗೆ ಬರೋಡಾ ಕಿಸಾನ್ ದಿವಸ್‌ ಕಾರ್ಯಕ್ರಮ ನಡೆಸಿತು.

ಎರಡು ವಾರಗಳ ಅವಧಿಯಲ್ಲಿ ಬ್ಯಾಂಕ್‌ನ ಅರೆ–ನಗರ, ಗ್ರಾಮೀಣ ಮತ್ತು ನಗರ ಶಾಖೆಗಳು ಸಕ್ರಿಯವಾಗಿ ಭಾಗವಹಿಸಿದ್ದವು. ಕೃಷಿ ಉತ್ಪನ್ನಗಳು, ಯೋಜನೆಗಳು ಮತ್ತು ವಿತರಣಾ ವ್ಯವಸ್ಥೆಗಳ ಕುರಿತು ರೈತರಿಗೆ ಜಾಗೃತಿ ಮೂಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಬ್ಯಾಂಕ್‌ ತಿಳಿಸಿದೆ.

ಬೆಂಗಳೂರು ವಲಯ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ರೈತ ಸಭೆಗಳು, ಕಿಸಾನ್‌ ಮೇಳಗಳಂತಹ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದೇವೆ. ರೈತ ಸಮುದಾಯಗಳ ಭಾಗವಹಿಸುವಿಕೆ ಹೆಚ್ಚಿಸಲು ಮತ್ತು ನಮ್ಮ ಕೃಷಿ ಗ್ರಾಹಕರ ಬ್ಯಾಂಕಿಂಗ್ ಮತ್ತು ಹಣಕಾಸು ಅಗತ್ಯಗಳನ್ನು ಪೂರೈಸಲು ಈ ಕಾರ್ಯಕ್ರಮಗಳು ಸಹಾಯ ಮಾಡುತ್ತಿವೆ ಎಂದು ಬ್ಯಾಂಕ್‌ನ ಬೆಂಗಳೂರು ವಲಯದ ಮುಖ್ಯಸ್ಥ ದೇವವ್ರತ ದಾಸ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT