ಯಲಬುರ್ಗಾ: ‘ದೈನಂದಿನ ವ್ಯವಹಾರ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ತೆರಿಗೆ ವ್ಯವಸ್ಥೆಗೆ ಹೆಚ್ಚಿನ ಮಹತ್ವವಿದೆ. ಪ್ರಸ್ತುತ ಸಂದರ್ಭದಲ್ಲಿ ಸರಕು ಮತ್ತು ಸೇವಾ ತೆರಿಗೆ ಪದ್ಧತಿಯು ದೇಶದ ಆರ್ಥಿಕ ಹಾಗೂ ಸಾಮಾಜಿಕ ಸುಧಾರಣೆಯಲ್ಲಿ ದೊಡ್ಡ ಪಾತ್ರ ನಿರ್ವಹಿಸುತ್ತಿದೆ’ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್.ವಿ.ಡಾಣಿ ಹೇಳಿದರು.

ಪಟ್ಟಣದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ್ದ ಜಿಎಸ್ಟಿ 2.0 ಮತ್ತು ಆದಾಯ ತೆರಿಗೆ ಕಾಯ್ದೆ 2025 ಕುರಿತಂತೆ ನಡೆದ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ದೇಶದ ವಿವಿಧ ತೆರಿಗೆ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಭಾಗಿಯಾಗಿರುತ್ತಾರೆ. ಇಂತಹ ವಿವಿಧ ಕಾಯ್ದೆಗಳು ಆಗಾಗ ತಿದ್ದುಪಡಿಯ ಮೂಲಕ ಬದಲಾಗುತ್ತಿರುತ್ತವೆ. ಬದಲಾದ ಮತ್ತು ಸುಧಾರಣೆಯಾದ ಅಂಶಗಳ ಬಗ್ಗೆ ತಿಳಿದುಕೊಳ್ಳುವುದು ಅವಶ್ಯ’ ಎಂದರು.

‘ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳಿಗೆ ಜಿಎಸ್ಟಿ ಮತ್ತು ಆದಾಯ ತೆರಿಗೆ ಕಾಯ್ದೆಗಳ ಜೊತೆಗೆ ಇನ್ನಿತರ ಕಾಯ್ದೆಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತವೆ. ಆರ್ಥಿಕ, ಕಾನೂನು ಹಾಗೂ ಆಡಳಿತಾತ್ಮಕ ಜ್ಞಾನವು ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಪ್ರೇರಣೆ ನೀಡುವುದರಿಂದ ವಿದ್ಯಾರ್ಥಿಗಳು ಎಲ್ಲ ವಿಷಯಗಳ ಬಗ್ಗೆ ಜ್ಞಾನವನ್ನು ಪಡೆದುಕೊಳ್ಳುವತ್ತ ಹೆಚ್ಚು ಕ್ರಿಯಾಶೀಲರಾಗಬೇಕು. ತಂತ್ರಜ್ಞಾನದ ಆಧಾರಿತ ವ್ಯವಸ್ಥೆಗಳು ಹೆಚ್ಚು ಪ್ರಚಲಿತದಲ್ಲಿರುವುದರಿಂದ ಅದಕ್ಕೆ ತಕ್ಕಂತೆ ಜ್ಞಾನವನ್ನು ಹೊಂದುವುದು ಅವಶ್ಯವಾಗಿದೆ’ ಎಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿ ಪಾಂಡುರಂಗ ವಿ., ಮಂಜುನಾಥ ಹೊಸ್ಮಮನಿ ಮಾತನಾಡಿ, ಜಿಎಸ್ಟಿ 2.0ದಲ್ಲಿ ಅಳವಡಿಸಿದ ಹೊಸ ನಿಯಮಗಳು, ಆದಾಯ ತೆರಿಗೆ 2025ರಲ್ಲಿ ಸೇರಿಸಿದ ಪ್ರಮುಖ ಅಂಶಗಳು, ಇತ್ತೀಚೆಗಿನ ತಿದ್ದುಪಡಿ ಕಾಯ್ದೆಗಳು, ಡಿಜಿಟಲ್ ವ್ಯವಸ್ಥೆ ಮತ್ತು ಪಾವತಿಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಕೇಳಿದ ಹಲವು ಪ್ರಶ್ನೆಗಳಿಗೆ ಸಂಪನ್ಮೂಲ ವ್ಯಕ್ತಿಗಳು ಉತ್ತರಿಸಿದರು. ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಎಚ್. ರಾಮದುರ್ಗ, ಪ್ರತಿಭಾ ಹಿರೇಮಠ, ಅಲ್ತಾಫ್ ಹುಸೇನ್, ಪಡಿಯಪ್ಪ, ರವಿ ಚಳ್ಳಾರಿ, ಉಮೇಶ, ಶ್ರುತಿ, ಕಾವ್ಯ, ಕರಿಷ್ಮಾ, ಪಮೀದಾ, ರಾಜ್ಯಶಾಸ್ತ್ರ ವಿಭಾಗದ ದೇವಪ್ಪ ಬಂಡ್ಲೇರ, ವಿದ್ಯಾರ್ಥಿ ಭೀಮಪ್ಪ ರಾವಣಕಿ ಸೇರಿ ಅನೇಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-35-314083049

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.